Latest

ಸ್ಕೂಟರ್ ಬಿಡುಗಡೆಗೆ ₹3 ಸಾವಿರ ಲಂಚ: ಇನ್‌ಸ್ಪೆಕ್ಟರ್‌ ಸೇರಿದಂತೆ ಇಬ್ಬರು ಬಂಧನ

ಮಂಗಳೂರು: ಉತ್ತರ ಸಂಚಾರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್ ಮಹಮ್ಮದ್ ಷರೀಫ್ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ, ಲಂಚ ಪಡೆದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರ ಕೈಗೆ ಬಿದ್ದಿದ್ದಾರೆ. ಸ್ಕೂಟರ್ ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದ್ದರೂ, ಅದನ್ನು ಜಾರಿಗೆ ತರಲು ₹5,000 ಲಂಚದ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪದ ಆಧಾರದ ಮೇಲೆ ಈ ಬಂಧನ ನಡೆದಿದೆ.

ಘಟನೆಯ ವಿವರ:
ಪೊಲೀಸರ ವಶದಲ್ಲಿದ್ದ ಸ್ಕೂಟರ್ ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದ ಬಳಿಕ, ದೂರುದಾರ ಇನ್‌ಸ್ಪೆಕ್ಟರ್ ಮಹಮ್ಮದ್ ಷರೀಫ್ ಅವರನ್ನು ಭೇಟಿಯಾಗಿ ಸ್ಕೂಟರ್ ಬಿಡುಗಡೆಗಾಗಿ ವಿನಂತಿಸಿದರು. ಈ ವೇಳೆ, ಷರೀಫ್ ₹5,000 ಲಂಚದ ಬೇಡಿಕೆ ಇಟ್ಟಿದ್ದು, ದೂರುದಾರರು ಮೊತ್ತವನ್ನು ಕಡಿಮೆ ಮಾಡಲು ಮನವಿ ಮಾಡಿದಾಗ, ಅವರು ಠಾಣಾ ಬರಹಗಾರ ನಾಗರತ್ನ ಅವರನ್ನು ಸಂಪರ್ಕಿಸಲು ಸೂಚಿಸಿದರು.

ನಾಗರತ್ನ, ಲಂಚಕ್ಕಾಗಿ ಅವಾಚ್ಯವಾಗಿ ಬೈದು, ₹3,000 ಒಪ್ಪಿಕೊಳ್ಳುವಂತೆ ಹೇಳಿದರೆಂದು ದೂರುದಾರರು ಆರೋಪಿಸಿದರು. ಲಂಚ ನೀಡಲು ಮನಸ್ಸಿಲ್ಲದ ದೂರುದಾರರು ಲೋಕಾಯುಕ್ತ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದರು.

ಲೋಕಾಯುಕ್ತ ಕಾರ್ಯಾಚರಣೆ:
ಲೋಕಾಯುಕ್ತ ಅಧಿಕಾರಿಗಳು ಸೋಮವಾರ ದೂರುದಾರರ ಮಾಹಿತಿಯ ಮೇರೆಗೆ ದಾಳಿ ಮಾಡಿ ₹3,000 ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಇನ್‌ಸ್ಪೆಕ್ಟರ್ ಮಹಮ್ಮದ್ ಷರೀಫ್ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕನನ್ನು ಬಂಧಿಸಿದರು.

ಅಧಿಕಾರಿಗಳ ಪ್ರತಿಕ್ರಿಯೆ.

ಈ ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ ಎಂದು ಲೋಕಾಯುಕ್ತ ಪೊಲೀಸರು ಹೇಳಿರುತ್ತಾರೆ. ಅಧಿಕಾರಿಗಳಾದ ಪ್ರಭಾರ ಎಸ್‌ಪಿ ನಂದಿನಿ ಬಿ.ಎನ್., ಡಿವೈಎಸ್‌ಪಿ ಗಾನ ಪಿ.ಕುಮಾರ್, ಇನ್‌ಸ್ಪೆಕ್ಟರ್ ಅಮಾನುಲ್ಲಾ ಎ., ಚಂದ್ರಶೇಖರ್ ಕೆ.ಎನ್., ಉಡುಪಿ ಠಾಣೆಯ ಇನ್‌ಸ್ಪೆಕ್ಟರ್ ಮಂಜುನಾಥ ಹಾಗೂ ಅವರ ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿರುತ್ತದೆ.

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago