Latest

₹50 ಸಾವಿರ ಲಂಚ ಪ್ರಕರಣ: ಸಹಕಾರ ಸಂಘಗಳ ಕಚೇರಿ ಅಧೀಕ್ಷಕ ಭರತೇಶ ಶೇಬನ್ನವರ ಬಂಧನ

ಬೆಳಗಾವಿ: ಸಹಕಾರ ಸಂಘದ ನೋಂದಣಿಗಾಗಿ ₹50 ಸಾವಿರ ಲಂಚ ಪಡೆಯಲು ಪ್ರಯತ್ನಿಸಿದ್ದ ಆರೋಪದ ಮೇಲೆ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ಅಧೀಕ್ಷಕ ಭರತೇಶ ಶೇಬನ್ನವರ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದರು.

ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರದ ಪ್ರಶಾಂತ ಆತ್ಮರಾಮ ಕೆಳಗಡೆ ಅವರು ‘ಯುನೈಟೆಡ್ ಸೋಷಿಯಲ್ ಆಯಂಡ್ ಸ್ಪೋರ್ಟ್ಸ್ ಕ್ಲಬ್’ ಎಂಬ ಹೊಸ ಸಂಘವನ್ನು ನೋಂದಾಯಿಸಲು ಸಂಬಂಧಪಟ್ಟ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಪ್ರಕ್ರಿಯೆಯನ್ನು ಮುಂದುವರಿಸಲು ಭರತೇಶ ಶೇಬನ್ನವರ ₹50 ಸಾವಿರ ಲಂಚ ಕೇಳಿದ್ದಾಗಿ ಆರೋಪಿಸಲಾಗಿದೆ.

ಅರ್ಜಿ ಸಲ್ಲಿಸಿದ 20 ದಿನಗಳಾದರೂ ಕೆಲಸ ಮುನ್ನಡೆಯದ ಕಾರಣ, ಬೇಸರಗೊಂಡ ಪ್ರಸ್ತುತ ಅರ್ಜಿದಾರರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು. ಈ ಹಿನ್ನೆಲೆಯಲ್ಲಿ, ಅಧಿಕಾರಿಗಳು ಸಂಚು ರೂಪಿಸಿ ಭರತೇಶ ಶೇಬನ್ನವರನ್ನು ಲಂಚ ಸ್ವೀಕರಿಸುವಾಗ ಕೈಬಿಟ್ಟಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಇಲಾಖೆ ತಿಳಿಸಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

23 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago