ಹಾಸನ: ಎನ್‌ಸಿಆರ್ ಪ್ರಕರಣವೊಂದನ್ನು ಇತ್ಯರ್ಥಪಡಿಸಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಹಳೇಬೀಡು ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ಲಂಚದ ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.
ಎನ್‌ಸಿಆರ್ ಪ್ರಕರಣವನ್ನು ಇತ್ಯರ್ಥಪಡಿಸುವುದಕ್ಕಾಗಿ ನವೀನ್ ಎಂಬುವವರ ಬಳಿ ಪಿಎಸ್‌ಐ ಮಂಜುನಾಥ್ ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ ಮೊದಲ ಹಂತವಾಗಿ ₹20 ಸಾವಿರ ನೀಡುವಂತೆ ಸೂಚಿಸಿದ್ದರು ಎಂದು ತಿಳಿದುಬಂದಿದೆ.
ಈ ಕುರಿತು ನವೀನ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಹಾಸನದ ಹೋಟೆಲ್‌ವೊಂದರಲ್ಲಿ ₹20 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಪಿಎಸ್‌ಐ ಮಂಜುನಾಥ್ ಅವರನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಶಿಲ್ಪಾ ಹಾಗೂ ಗವಿರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಲಂಚದ ಹಣ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರಿಸಿದ್ದು, ಲಂಚದ ಬೇಡಿಕೆಯ ಹಿನ್ನೆಲೆ ಹಾಗೂ ಪ್ರಕರಣದ ಸಂಪೂರ್ಣ ವಿವರಗಳನ್ನು ಪರಿಶೀಲಿಸಲಾಗುತ್ತಿದೆ.
ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…
ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…
ಹಾವೇರಿ: ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಕೆಲಸ ಮಾಡಿಕೊಡಲು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಅಧಿಕಾರಿಯೊಬ್ಬರು ಲೋಕಾಯುಕ್ತ…
ನವದೆಹಲಿ: ತನ್ನ ಪ್ರಿಯಕರ ಮತ್ತೊಬ್ಬ ಮಹಿಳೆಯೊಂದಿಗೆ ತೆರಳಿದ್ದಾನೆ ಎಂದು ಆರೋಪಿಸಿ ದೆಹಲಿ ಮೂಲದ ಖ್ಯಾತ ಬ್ಲಾಗರ್ ಶ್ವೇತಾ ದ್ವಿವೇದಿ ಸಾಮಾಜಿಕ…
ಬಳ್ಳಾರಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಿಜವಾದ ಜಮೀನು ಮಾಲೀಕರ ಹೆಸರನ್ನು ದುರುಪಯೋಗಪಡಿಸಿಕೊಂಡು ಸುಮಾರು ₹1.08 ಕೋಟಿ ಮೌಲ್ಯದ ಜಮೀನನ್ನು ವಂಚನೆಯಿಂದ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಮಹತ್ವದ ಹಂತ ತಲುಪಿದೆ. ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ರಾವ್ ಮಾಫಿ…