Categories: Latest

ಶಾಲಾ ತರಗತಿಯಲ್ಲಿ 10 ಅಡಿ ಕಾಳಿಂಗ ಸರ್ಪ ಪತ್ತೆ: ವಿದ್ಯಾರ್ಥಿಗಳಲ್ಲಿ ಆತಂಕ

ಕಾರವಾರ: ಗುಡ್ಡಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿ ಕೊಠಡಿಯಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾದ ಘಟನೆ ಕೆಲಕಾಲ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಉಂಟುಮಾಡಿತು.

ತರಗತಿಯಲ್ಲಿ ಹಾವು ಬುಸುಗುಟ್ಟುತ್ತಿರುವುದನ್ನು ಗಮನಿಸಿದ ಶಿಕ್ಷಕರು ತಕ್ಷಣ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ಸುರಕ್ಷತಾ ಕ್ರಮ ಕೈಗೊಂಡರು. ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು.

ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ ಪರಿಶೀಲನೆ ನಡೆಸಿದಾಗ, ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ತರಗತಿಯ ಮೇಜಿನ ಕೆಳಗೆ ಸುತ್ತಿಕೊಂಡು ಕುಳಿತಿರುವುದು ಕಂಡುಬಂದಿತು. ಹಾವನ್ನು ಹೊರತೆಗೆದಲು ಯತ್ನಿಸಿದಾಗ ಅದು ಮೇಜಿನ ಮೇಲಿದ್ದ ಪುಸ್ತಕಗಳ ರಾಶಿಯೊಳಗೆ ನುಗ್ಗಿ ಅಡಗಿಕೊಂಡಿತು.

ದೀರ್ಘ ಕಾಲದ ಪ್ರಯತ್ನದ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಹಾವನ್ನು ಸುರಕ್ಷಿತವಾಗಿ ಹಿಡಿದು ದೂರದ ಅರಣ್ಯ ಪ್ರದೇಶದಲ್ಲಿ ಬಿಡುಗಡೆ ಮಾಡಿದರು.

ಸ್ಥಳೀಯರ ಮಾಹಿತಿ ಪ್ರಕಾರ, ಗುಡ್ಡಹಳ್ಳಿ ಸುತ್ತಮುತ್ತ ದಟ್ಟವಾದ ಮರಗಳು ಹಾಗೂ ತಂಪಾದ ವಾತಾವರಣ ಇರುವುದರಿಂದ ಕಾಳಿಂಗ ಸರ್ಪಗಳು ಕೆಲವೊಮ್ಮೆ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಗ್ರಾಮಸ್ಥರು ಸಾಮಾನ್ಯವಾಗಿ ಅವುಗಳನ್ನು ಕೊಲ್ಲದೇ ದೂರ ಓಡಿಸುವ ಪ್ರಯತ್ನ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳ ಪ್ರಕಾರ, ಇಲಿ ಮತ್ತು ಹೆಗ್ಗಣಗಳಂತಹ ಸಣ್ಣ ಪ್ರಾಣಿಗಳನ್ನು ಬೇಟೆಯಾಡಲು ಹಾವು ತರಗತಿಗೆ ಬಂದಿರಬಹುದು. ಇತರ ಹಾವುಗಳ ವಾಸನೆಗಳನ್ನು ಕಾಳಿಂಗ ಸರ್ಪಗಳು ಸುಲಭವಾಗಿ ಗುರುತಿಸುವ ಸಾಮರ್ಥ್ಯ ಹೊಂದಿರುವುದರಿಂದ ಆ ವಾಸನೆ ಹಿಡಿದು ತರಗತಿಗೆ ನುಗ್ಗಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಹಣದಾಸೆಗೆ ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಿದ ತಾಯಿ; ಗಿರಾಕಿಗಳ ಬಳಿ ಬಿಟ್ಟು ಬರುತ್ತಿದ್ದ ಮಲತಂದೆ:- ಮೂವರ ಬಂಧನ

ಬೆಂಗಳೂರು: ಹಣದಾಸೆಗೆ ಒಳಗಾಗಿ ತನ್ನದೇ 15 ವರ್ಷದ ಮಗಳನ್ನು ಮಾಂಸದಂಧೆಗೆ ತಳ್ಳಿದ ತಾಯಿಯ ಅಮಾನವೀಯ ಕೃತ್ಯವನ್ನು ಚಂದ್ರಾಲೇಔಟ್ ಪೊಲೀಸ್ ಠಾಣೆ…

8 hours ago

ಅಬಕಾರಿ ಅಧಿಕಾರಿಗೆ ಲೋಕಾಯುಕ್ತ ಬಲೆ: ಕೋಟ್ಯಂತರ ಅಕ್ರಮ ಆಸ್ತಿ ಪತ್ತೆ

ಉಡುಪಿ: ಅಬಕಾರಿ ಇಲಾಖೆಯ ಉಡುಪಿ ಜಿಲ್ಲಾ ಅಧೀಕ್ಷಕ ಶ್ರೀನಿವಾಸ್ ಟಿ.ಎಂ. ವಿರುದ್ಧ ಅಪಾರ ಪ್ರಮಾಣದ ಅಕ್ರಮ ಆಸ್ತಿ ಸಂಗ್ರಹಿಸಿರುವ ಆರೋಪದ…

10 hours ago

ಜೋಯಿಡಾದಲ್ಲಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದಲ್ಲಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಆಡಳಿತಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ. ಸರ್ಕಾರಿ…

1 day ago

ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳ್ಳತನ

ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ…

3 days ago

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

1 week ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

3 weeks ago