Latest

ಬಂಗಾರಪೇಟೆ ವ್ಯಾಪ್ತಿಯಲ್ಲಿ ನಿಯಮದ ಪ್ರಕಾರ ಕನ್ನಡ ನಾಮಪಲಕ ಅಳವಡಿಸಲು 10ನೇ ತಾರೀಕು ಕಡೆಯ ದಿನ.

ಕರ್ನಾಟಕ ಸರ್ಕಾರದ ಆದೇಶದಂತೆ ಬಂಗಾರಪೇಟೆ ಪುರಸಭೆ ವ್ಯಾಪ್ತಿಯಲ್ಲಿ ವ್ಯಾಪಾರ/ಉದ್ದಿಮೆ/ಕೈಗಾರಿಕೆಗಳನ್ನು ನಡೆಸುತ್ತಿರುವವರು ಸಾರ್ವಜನಿಕರ ಮಾಹಿತಿಗಾಗಿ ತಮ್ಮ ಅಂಗಡಿ ಮುಂಗಟ್ಟುಗಳ ನಾಮಫಲಕಗಳನ್ನು ಬರೆಸಿಕೊಂಡಿರುತ್ತಾರೆ. ಆದರೆ ಸರ್ಕಾರದ ಆದೇಶದಂತೆ ನಾಮಫಲಕಗಳಲ್ಲಿ ಕನ್ನಡ ಭಾಷೆಯಲ್ಲಿ ಶೇ. 60% ರಷ್ಟು ಬಾಕಿ ಉಳಿದ ಶೇ 40% ರಷ್ಟು ಬೇರೆ ಭಾಷೆ ಬರೆಸಿ ಕೊಳ್ಳಬಹುದಾಗಿರುತ್ತದೆ. ಇದರಂತೆ ಸರ್ಕಾರದ ಆದೇಶದಂತೆ ಕ್ರಮವಹಿಸಲು ಬಂಗಾರಪೇಟೆ ಪುರಸಭೆ ಕಚೇರಿ ಸಿಬ್ಬಂದಿವರ್ಗದವರು ಖುದ್ದಾಗಿ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಹಾಗೂ ಧ್ವನಿವರ್ಧಕಗಳ ಮೂಲಕ ಹಲವಾರು ಬಾರಿ ವ್ಯಾಪಕ ಪ್ರಚಾರ ನೀಡಲಾಗಿದೆ. ಆದರೂ ಸಹ ಇದಕ್ಕೆ ಕೆಲವರು ಸ್ಪಂದಿಸದೆ ಇನ್ನು ಹಳೆಯ ನಾಮಫಲಕಗಳನ್ನು ಮುಂದುವರಿಸಿಕೊಂಡು ಬರುತ್ತಿರುವುದನ್ನು ಬಂಗಾರಪೇಟೆ ಪುರಸಭೆಯು ಗಂಭೀರವಾಗಿ ಪರಿಗಣಿಸಿದೆ.

ಸರ್ಕಾರದ ಆದೇಶದಂತೆ ಶೇ. 60% ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕಗಳನ್ನು ಕೂಡಲೇ ದಿನಾಂಕ 10.02.2025 ರ ಒಳಗಾಗಿ ಯಾರೆಲ್ಲ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿ ತಮ್ಮ ವ್ಯಾಪಾರ ವಹಿವಾಟನ್ನು ನಡೆಸುತ್ತಿರುವವರು ಕೂಡಲೇ ಕನ್ನಡ ಭಾಷೆಯಲ್ಲಿ ಶೇ. 60% ರಷ್ಟು ನಾಮಫಲಕವನ್ನು ಅಳವಡಿಸಬೇಕು. ಈ ಆದೇಶವನ್ನು ತಪ್ಪಿದ್ದಲ್ಲಿ ಸರ್ಕಾರದ ನಿಯಮದಂತೆ ಸಂಬಂಧಿಸಿದವರ ವಿರುದ್ಧ ಚಾಲ್ತಿಯಲ್ಲಿರುವ ಕಾನೂನಿನಂತೆ ಕ್ರಮ ಜರುಗಿಸಲಾಗುವುದು ಎಂದು ಬಂಗಾರಪೇಟೆ ಪುರಸಭೆ ಮುಖ್ಯಾಧಿಕಾರಿ ಆದೇಶ ಹೊರಡಿಸಿ ಎಚ್ಚರಿಕೆ ನೀಡಿದ್ದಾರೆ. ವರದಿ: ರೋಶನ್ ಜಮೀರ್

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago