Latest

ತುಮಕೂರಿನಲ್ಲಿ 11 ಬಾಲ ಕಾರ್ಮಿಕರು ಪತ್ತೆ: ಜಿಲ್ಲಾಧಿಕಾರಿಯಿಂದ ತೀವ್ರ ಸೂಚನೆ.

ತುಮಕೂರು: ಜಿಲ್ಲೆಯಲ್ಲಿ ಬಾಲಕಾರ್ಮಿಕರ ಪತ್ತೆ ಕಾರ್ಯ ಇನ್ನೂ ಗಂಭೀರ ತೀವ್ರತೆಗೆ ತಲುಪಿಲ್ಲ ಎಂಬುದನ್ನು ತೋರುತ್ತದೆ. 2024-25ನೇ ಹಣಕಾಸು ವರ್ಷದಲ್ಲಿ ಕೇವಲ 11 ಬಾಲಕಾರ್ಮಿಕರು ಮಾತ್ರ ಪತ್ತೆಯಾಗಿರುವುದನ್ನು ಜಿಲ್ಲಾ ಅಧಿಕಾರಿಗಳು ಗಮನಿಸಿ, ಈ ಕಾರ್ಯದಲ್ಲಿ ಮತ್ತಷ್ಟು ಚುರುಕು ತರಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಖಡಕ್ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಬಾಲಕಾರ್ಮಿಕ ನಿರ್ಮೂಲನೆ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಹಾಗೂ ಜಿಲ್ಲಾ ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿದರು. ಈ ಸಂದರ್ಭ, ಕಾರ್ಮಿಕ ಇಲಾಖೆ ಅಧಿಕಾರಿಗಳ ತಂಡ ಕಳೆದ ಒಂದು ವರ್ಷದಲ್ಲಿ ಕೇವಲ 397 ತಪಾಸಣೆಗಳನ್ನು ನಡೆಸಿರುವುದು ಸ್ಪಷ್ಟವಾಯಿತು.

ಇದರಿಂದ ತೃಪ್ತರಾಗದ ಜಿಲ್ಲಾಧಿಕಾರಿ, ಮುಂದಿನ ಹತ್ತು ದಿನಗಳಲ್ಲಿ ಕಾರ್ಮಿಕ ನಿರೀಕ್ಷಕರು ತಮ್ಮ ವ್ಯಾಪ್ತಿಯ ಕಾರ್ಖಾನೆಗಳು, ಮಾರಾಟ ಮಳಿಗೆಗಳು, ತೆಂಗಿನಕಾಯಿ ವಿತರಣಾ ಕೇಂದ್ರಗಳು, ಗ್ಯಾರೇಜುಗಳು ಸೇರಿದಂತೆ ವಿವಿಧ ಸ್ಥಳಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಕಟ್ಟುನಿಟ್ಟಾದ ಸೂಚನೆ ನೀಡಿದರು.

ಸಭೆಯಲ್ಲಿ ಮಾತನಾಡಿದ ಕಾರ್ಮಿಕ ಅಧಿಕಾರಿ ಕೆ. ತೇಜಾವತಿ, ಈವರೆಗೆ ಪತ್ತೆಯಾಗಿರುವ ಮೂವರು ಬಾಲಕಾರ್ಮಿಕರ ಪ್ರಕರಣಗಳಲ್ಲಿ ಮಾಲೀಕರ ವಿರುದ್ಧ ದೂರು ದಾಖಲಿಸಿ ದಂಡ ವಸೂಲಿಸಲಾಗಿದೆಯೆಂದು ತಿಳಿಸಿದ್ದಾರೆ. ಪತ್ತೆಯಾದ ನಾಲ್ವರು ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಲಾಗಿದೆ. ಉಳಿದ ಮಕ್ಕಳನ್ನು ಪೋಷಕರ ವಶಕ್ಕೆ ನೀಡಲಾಗಿದೆ ಎಂದರು.

ಸಭೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ್, ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ನಗರಾಭಿವೃದ್ಧಿ ಉಪನಿರ್ದೇಶಕ ಯೋಗಾನಂದ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯಕ್ರಮಾಧಿಕಾರಿ ದಿನೇಶ್ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.

ಬಾಲಕಾರ್ಮಿಕರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ನಿರಂತರ ಪರಿಶೀಲನೆ ಮತ್ತು ಕಠಿಣ ಕ್ರಮಗಳು ಅಗತ್ಯವಿದ್ದು, ಈ ನಿಟ್ಟಿನಲ್ಲಿ ಇಲಾಖೆ ಉತ್ಸಾಹದಿಂದ ಕಾರ್ಯನಿರ್ವಹಿಸಬೇಕು ಎಂಬುದು ಸಭೆಯಲ್ಲಿ ವ್ಯಕ್ತವಾಯಿತು.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

6 hours ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

12 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

12 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

12 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

12 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

13 hours ago