Latest

ಹುಬ್ಬಳ್ಳಿಯಲ್ಲಿ 11 ತಿಂಗಳ ಮಗು ಕೋವಿಡ್ ಪಾಸಿಟಿವ್: ಆರೋಗ್ಯ ಸ್ಥಿರ, ವೈದ್ಯಕೀಯ ಉನ್ನತ ನಿಗಾ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಭೈರಿದೇವರಕೊಪ್ಪದಲ್ಲಿ 11 ತಿಂಗಳ ಮಗು ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೃದಯ ಸಂಬಂಧಿತ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಈ ಮಗು, ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಕಿಮ್ಸ್) ಆಸ್ಪತ್ರೆಗೆ ಕರೆತರಲಾಗಿತ್ತು. ತಪಾಸಣೆಯ ವೇಳೆ ಮಗುವಿಗೆ ಕೋವಿಡ್ ಸೋಂಕು ಇರುವುದಾಗಿ ದೃಢವಾಯಿತೆಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಧಾರವಾಡ ಜಿಲ್ಲೆಯ ಅಧಿಕಾರಿಗಳು, “ಮಗುವಿಗೆ ತಕ್ಷಣವೇ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯದಲ್ಲಿ ಆರೋಗ್ಯ ಸ್ಥಿರವಾಗಿದೆ. ತೀವ್ರ ನಿಗಾದೊಂದಿಗೆ ಚಿಕಿತ್ಸೆ ಮುಂದುವರೆದಿದೆ” ಎಂದು ತಿಳಿಸಿದ್ದಾರೆ.

ಕೋವಿಡ್ ಪ್ರಕರಣದ ಪಶ್ಚಾತ್, ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಎಚ್ಚರಿಕೆ ಜಾರಿಗೊಳಿಸಲಾಗಿದೆ. ಅನಿವಾರ್ಯವಾಗಿ ಮಾಸ್ಕ್ ಧರಿಸುವುದು, ಜನಸಂದಣಿಯಿಂದ ದೂರವಿರುವುದು, ಸಾಮಾಜಿಕ ಅಂತರ ಕಾಪಾಡುವುದು ಎಂಬ ಕ್ರಮಗಳನ್ನು ಪಾಲಿಸುವಂತೆ ಜನತೆಗೆ ತಿಳಿಸಲಾಗಿದೆ. ವಿಶೇಷವಾಗಿ ಗರ್ಭಿಣಿಯರು ಹಾಗೂ ಪುಟಾಣಿ ಮಕ್ಕಳ ಹೆತ್ತವರು ಹೆಚ್ಚು ಎಚ್ಚರಿಕೆಯಿಂದ ವರ್ತಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ವರದಿ: ಶಿವರಾಜ್ ಪಿ.ಆರ್.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

2 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

2 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

2 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

3 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

3 hours ago