Crime

13 ವರ್ಷದ ಕ್ಯಾನ್ಸರ್ ಪೀಡಿತ ಬಾಲಕಿಯ ಮೇಲೆ ಅತ್ಯಾಚಾರ..!

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಮಾನವೀಯತೆಯೆಂಬ ಮೌಲ್ಯವೇ ಪ್ರಶ್ನೆಗೆ ಒಳಪಡಿಸುವ ದುರ್ಘಟನೆ ಬೆಳಕಿಗೆ ಬಂದಿದೆ. 13 ವರ್ಷದ ಕ್ಯಾನ್ಸರ್ ಪೀಡಿತ ಬಾಲಕಿಯೊಬ್ಬಳ ಮೇಲೆ ಆಕೆಯ ಪರಿಚಯದ ವ್ಯಕ್ತಿಯೇ ಹೀನ ಕೃತ್ಯ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ಗೊತ್ತಾದ ನಂತರ, ಈ ಭೀಕರ ಘಟನೆ ಹೊರಬಿದ್ದಿದೆ.

ಬಾಲಕಿ ತನ್ನ ಕ್ಯಾನ್ಸರ್ ಚಿಕಿತ್ಸೆಗೆಂದು ಬದ್ಲಾಪುರಕ್ಕೆ ಬಂದಿದ್ದು, ಆಕೆಯ ಪರಿಚಿತನಾದ 29 ವರ್ಷದ ವ್ಯಕ್ತಿಯೊಬ್ಬನು ಆಕೆಗೆ ಬಾಡಿಗೆ ಮನೆ ಹೊಂದಿಸಿ, ಚಿಕಿತ್ಸೆಗಾಗಿ ಸಹಾಯ ಮಾಡುತ್ತಿದ್ದ ಎನ್ನಲಾಗಿದೆ. ಆದರೆ ಈ ನಂಬಿಕೆಯನ್ನು ದುರ್ಬಳಕೆ ಮಾಡಿಕೊಂಡ ಬಾಲಕಿ ಮನೆಯಲ್ಲಿ ಒಬ್ಬಳಾಗಿ ಇರುವ ಸಂದರ್ಭಗಳಲ್ಲಿ ಹಲವಾರು ಬಾರಿ ಅತ್ಯಾಚಾರ ಎಸಗಿದ್ದನು.

ಅಸಹಾಯಕತೆಗೆ ಒಳಪಟ್ಟಿದ್ದ ಬಾಲಕಿ, ಭಯದಿಂದ ಬಾಯಿತೆರೆಯಲಾಗದೆ ಮೌನವಾಗಿದ್ದಳು. ಆದರೆ ಕೆಲವು ದಿನಗಳ ಹಿಂದೆ ಕೀಮೋಥೆರಪಿಗೆ ನಡೆದ ಪರೀಕ್ಷೆಯಲ್ಲಿ ಆಕೆ ಗರ್ಭಿಣಿಯಾಗಿರುವುದು ವೈದ್ಯರಿಗೆ ತಿಳಿದುಬಂತು. ಈ ವಿಷಯವನ್ನು ಕುಟುಂಬಕ್ಕೆ ತಿಳಿಸಿದ ನಂತರ, ಬಾಲಕಿ ತಾನು ಅನುಭವಿಸಿದ ಹಿಂಸೆಯ ಕಥೆಯನ್ನು ತಮ್ಮ ಮುಂದೆ ಬಿಚ್ಚಿಟ್ಟಳು.

ಕುಟುಂಬದವರು ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವಿಲ್ಲದೆ ಬಿಹಾರಕ್ಕೆ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ತಾಂತ್ರಿಕ ಸಹಾಯದಿಂದ ಪತ್ತೆಹಚ್ಚಿ, ಬಂಧಿಸುವಲ್ಲಿ ಯಶಸ್ವಿಯಾದರು. ವಿಚಾರಣೆಯ ವೇಳೆ ಆರೋಪಿಯು ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.

ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಬಾಲಕಿಗೆ ಹೆಚ್ಚಿನ ವೈದ್ಯಕೀಯ ಹಾಗೂ ಮಾನಸಿಕ ಸಹಾಯ ನೀಡಲು ಕ್ರಮ ಜರುಗಿಸಲಾಗಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

21 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago