Latest

ಯೂನಿಫಾರಂ ಇಲ್ಲ ಎಂಬ ಕಾರಣಕ್ಕೆ ಭಯದಿಂದ 13 ವರ್ಷದ ಬಾಲಕಿ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಲಿಂಗದಹಳ್ಳಿ ಗ್ರಾಮದಲ್ಲಿ ಮನಕಲಕುವ ದಾರುಣ ಘಟನೆ ನಡೆದಿದೆ. ಯೂನಿಫಾರಂ ಇಲ್ಲದ ಕಾರಣ ಶಿಕ್ಷಕರು ಗದರಿಸಬಹುದು ಎಂಬ ಭಯದಿಂದ 13 ವರ್ಷದ ಬಾಲಕಿ ನಿವೇದಿತಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಶಾಲೆ ಆರಂಭವಾಗುತ್ತಿದ್ದಂತೆ ಶಿಕ್ಷಕರು ಎಲ್ಲ ವಿದ್ಯಾರ್ಥಿಗಳಿಗೂ ಯೂನಿಫಾರಂ ಧರಿಸುವಂತೆ ಸೂಚನೆ ನೀಡಿದ್ದರು. ನಿವೇದಿತಾ ಪೋಷಕರು ಕೂಡಾ ಈ ಸೂಚನೆಯಂತೆ ಸಮವಸ್ತ್ರವನ್ನು ಹೊಲಿಯಲು ಟೈಲರ್‌ಗೆ ನೀಡಿದ್ದಾರೆ. ಆದರೆ ಟೈಲರ್‌ನಿಂದ ಯೂನಿಫಾರಂ ಸಿದ್ಧವಾಗದೇ ಬಿಟ್ಟ ಕಾರಣ, ಶಿಕ್ಷಕರು ತಿರಸ್ಕಾರ ಮಾಡಬಹುದು ಎಂಬ ಆತಂಕ ಈ ಬಾಲಕಿ ಮನಸ್ಸಿಗೆ ತುಂಬಿಕೊಂಡಿತ್ತು.

ಈ ಭೀತಿಯಿಂದಾಗಿ ನಿವೇದಿತಾ ಸೋಮವಾರ ತನ್ನ ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದಳು. ಘಟನೆ ನಂತರ ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾದರೂ, ವೈದ್ಯರು ಚಿಕಿತ್ಸೆ ಫಲಕಾರಿಯಾಗದೇ ಮೃತಘೋಷಿಸಿದರು.

ಈ ದುರ್ಘಟನೆ ಪೋಷಕರಲ್ಲಿ ಮಾತ್ರವಲ್ಲದೆ ಗ್ರಾಮಸ್ಥರಲ್ಲೂ ಆಘಾತ ಮೂಡಿಸಿದೆ. ಮಕ್ಕಳು ಎಂತಹ ಎದೆಯ ನೋವನ್ನೂ ಹೊರಗೆ ಹೇಳಿಕೊಳ್ಳದೇ ಒಳಗೊಳಿಸಿಕೊಂಡು ಹೋಗುತ್ತಿರುವುದು ಈ ಘಟನೆ ಮತ್ತೊಮ್ಮೆ ತೋರಿಸಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ.

nazeer ahamad

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

3 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

7 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

10 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

15 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago