Categories: CrimeLatest

MLC ಸ್ಥಾನ ಕೊಡಿಸುವುದಾಗಿ ₹1.5 ಕೋಟಿ ವಂಚನೆ; ಕಾಂಗ್ರೆಸ್ ನಾಯಕರ ಹೆಸರು ಬಳಸಿ ಮಹಿಳೆಗೆ ಮೋಸ, ಲೈಂಗಿಕ ಕಿರುಕುಳ ಆರೋಪ!

ಬೆಂಗಳೂರು: ಕಾಂಗ್ರೆಸ್‌ನ ಪ್ರಭಾವಿ ನಾಯಕರ ಮಾಧ್ಯಮ ಸಲಹೆಗಾರ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ, MLC ಸ್ಥಾನ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ₹1.50 ಕೋಟಿ ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಣ ವಂಚನೆಯ ಜೊತೆಗೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪವೂ ಕೇಳಿಬಂದಿದ್ದು, ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ದೂರಿನ ಪ್ರಕಾರ, ಯರ್ರಿಸ್ವಾಮಿ ಎಂಬಾತ ತಾನು ಕಾಂಗ್ರೆಸ್ ನಾಯಕರ ಆಪ್ತ ಹಾಗೂ ಮಾಧ್ಯಮ ಸಲಹೆಗಾರ ಎಂದು ಹೇಳಿಕೊಂಡು, ಹಲವು ರಾಜಕೀಯ ಮುಖಂಡರೊಂದಿಗೆ ತೆಗೆಸಿಕೊಂಡಿದ್ದ ಫೋಟೋಗಳನ್ನು ತೋರಿಸಿ ಮಹಿಳೆಯ ವಿಶ್ವಾಸ ಗಳಿಸಿದ್ದಾನೆ. ಬಳಿಕ MLC ಸ್ಥಾನ ದೊರಕಿಸಿಕೊಡುವುದಾಗಿ ಹೇಳಿ ₹5 ಕೋಟಿ ಬೇಡಿಕೆ ಇಟ್ಟಿದ್ದಾನೆ.

ಆತನ ಮಾತು ನಂಬಿದ ಮಹಿಳೆ 2024ರ ಆಗಸ್ಟ್‌ನಿಂದ 2025ರ ಜನವರಿವರೆಗೆ ಹಂತ ಹಂತವಾಗಿ ₹1.50 ಕೋಟಿ ಹಣವನ್ನು ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆರೋಪಿಯ ಸೂಚನೆಯಂತೆ ಮೈಸೂರು ಬ್ಯಾಂಕ್ ಸರ್ಕಲ್ ಸಮೀಪದ ಶಿಕ್ಷಕರ ಸದನ ಹಾಗೂ ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆ ಬಳಿ ಆತನ ಸಹಚರರಾದ ಸಿದ್ದರಾಜು ಮತ್ತು ಬಸವರಾಜು ಹಣ ಸ್ವೀಕರಿಸಿದ್ದಾರೆ ಎನ್ನಲಾಗಿದೆ.

ಇದರ ನಡುವೆ, ಎಐಸಿಸಿ (AICC) ಹೈಕಮಾಂಡ್ ನಾಯಕರನ್ನು ಭೇಟಿಮಾಡಿಸುವ ನೆಪದಲ್ಲಿ ಮಹಿಳೆಯನ್ನು ದೆಹಲಿಗೆ ಕರೆದೊಯ್ದು, ಅಲ್ಲಿ ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪವೂ ಯರ್ರಿಸ್ವಾಮಿ ವಿರುದ್ಧ ಕೇಳಿಬಂದಿದೆ.

ತಾನು ವಂಚನೆಗೆ ಒಳಗಾಗಿರುವುದು ತಿಳಿದ ಬಳಿಕ ಮಹಿಳೆ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಯರ್ರಿಸ್ವಾಮಿ, ಬಸವರಾಜು ಹಾಗೂ ಸಿದ್ದರಾಜು ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಾಜಕೀಯ ಪ್ರಭಾವದ ಹೆಸರಿನಲ್ಲಿ MLC ಸ್ಥಾನ ಕೊಡಿಸುವ ಭರವಸೆ ನೀಡಿ ಕೋಟ್ಯಂತರ ರೂಪಾಯಿ ವಂಚಿಸಿರುವ ಈ ಪ್ರಕರಣದ ಹಿಂದೆ ಇನ್ನೂ ಯಾರ್ಯಾರ ಪಾತ್ರವಿದೆ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

23 hours ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

23 hours ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago