ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ಸಂಭಾವನೆ ಶೇ.15ರಷ್ಟು ಹೆಚ್ಚಿಸಲಾಗಿದ್ದು, ಏಪ್ರಿಲ್ 1 ರಿಂದ ಇದು ಅನ್ವಯವಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು, 5 ವರ್ಷಕ್ಕಿಂತ ಹೆಚ್ಚು ಕಾಲ ನಿರಂತರವಾಗಿ ಕಾರ್ಯ ನಿರ್ವಹಿಸಿದ ಎನ್.ಎಚ್.ಎಂ ಮೆಡಿಕಲ್ ಅಧಿಕಾರಿಗಳಿಗೆ (ಎಂ.ಬಿ.ಬಿ.ಎಸ್, ಆಯುಷ್, ಆರ್.ಬಿ.ಎಸ್.ಕೆ, ದಂತವೈದ್ಯ, ಸರ್ಜನ್‌ಗಳು) ಕೂಡ ಶೇ.15ರಷ್ಟು ಸಂಭಾವನೆ ಹೆಚ್ಚಿಸಲಾಗಿದೆ. ಸೇರ್ಪಡೆಯಾಗುವ ಸಂದರ್ಭದಲ್ಲಿ 20 ಸಾವಿರ ರೂ. ಗಿಂತ ಕಡಿಮೆ ಸಂಭಾವನೆ ಇರುವ ನೌಕರರಿಗೆ ಶೇ.15 ರಷ್ಟು ಹೆಚ್ಚಳವಾಗಲಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ ಎಂದು ಹೇಳಿದರು.
ಎನ್‌ಎಚ್‌ಎಂ ಗುತ್ತಿಗೆ ತಜ್ಞರಿಗೆ, 3-5 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.5, 5-10 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.10, 10 ವರ್ಷಕ್ಕೂ ಅಧಿಕ ಕಾಲ ಸೇವೆಯಲ್ಲಿರುವವರಿಗೆ ಶೇ.15ರಷ್ಟು ಸಂಭಾವನೆ ಹೆಚ್ಚಳ ಮಾಡಲಾಗಿದೆ.
ನೌಕರರಿಗೆ ಮಾತು ನೀಡಿದ್ದಂತೆಯೇ ಕ್ರಮ ವಹಿಸಲಾಗಿದೆ. ಈ ಮೂಲಕ ನಮ್ಮ ಸರ್ಕಾರ ನೌಕರರ ಕ್ಷೇಮದ ಬದುಕಿಗೆ ಸದಾ ಶ್ರಮಿಸುತ್ತದೆ ಎಂದು ಹೇಳಿದರು.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…