Latest

40% ಸರ್ಕಾರದಿಂದ 15% ಹೆಚ್ಚಳ; ಗುತ್ತಿಗೆ ನೌಕರರ ಸಂಭಾವನೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ಸಂಭಾವನೆ ಶೇ.15ರಷ್ಟು ಹೆಚ್ಚಿಸಲಾಗಿದ್ದು, ಏಪ್ರಿಲ್ 1 ರಿಂದ ಇದು ಅನ್ವಯವಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು, 5 ವರ್ಷಕ್ಕಿಂತ ಹೆಚ್ಚು ಕಾಲ ನಿರಂತರವಾಗಿ ಕಾರ್ಯ ನಿರ್ವಹಿಸಿದ ಎನ್‌.ಎಚ್‌.ಎಂ ಮೆಡಿಕಲ್‌ ಅಧಿಕಾರಿಗಳಿಗೆ (ಎಂ.ಬಿ.ಬಿ.ಎಸ್‌, ಆಯುಷ್‌, ಆರ್‌.ಬಿ.ಎಸ್‌.ಕೆ, ದಂತವೈದ್ಯ, ಸರ್ಜನ್‌ಗಳು) ಕೂಡ ಶೇ.15ರಷ್ಟು ಸಂಭಾವನೆ ಹೆಚ್ಚಿಸಲಾಗಿದೆ. ಸೇರ್ಪಡೆಯಾಗುವ ಸಂದರ್ಭದಲ್ಲಿ 20 ಸಾವಿರ ರೂ. ಗಿಂತ ಕಡಿಮೆ ಸಂಭಾವನೆ ಇರುವ ನೌಕರರಿಗೆ ಶೇ.15 ರಷ್ಟು ಹೆಚ್ಚಳವಾಗಲಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ ಎಂದು ಹೇಳಿದರು.
ಎನ್‌ಎಚ್‌ಎಂ ಗುತ್ತಿಗೆ ತಜ್ಞರಿಗೆ, 3-5 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.5, 5-10 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.10, 10 ವರ್ಷಕ್ಕೂ ಅಧಿಕ ಕಾಲ ಸೇವೆಯಲ್ಲಿರುವವರಿಗೆ ಶೇ.15ರಷ್ಟು ಸಂಭಾವನೆ ಹೆಚ್ಚಳ ಮಾಡಲಾಗಿದೆ.
ನೌಕರರಿಗೆ ಮಾತು ನೀಡಿದ್ದಂತೆಯೇ ಕ್ರಮ ವಹಿಸಲಾಗಿದೆ. ಈ ಮೂಲಕ ನಮ್ಮ ಸರ್ಕಾರ ನೌಕರರ ಕ್ಷೇಮದ ಬದುಕಿಗೆ ಸದಾ ಶ್ರಮಿಸುತ್ತದೆ ಎಂದು ಹೇಳಿದರು.

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

20 hours ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

22 hours ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

2 days ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

2 days ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

2 days ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

2 days ago