ಬೆಳಗಾವಿ ನಗರ ಹೊರವಲಯದಲ್ಲಿರುವ ರೆಸಾರ್ಟ್‌ವೊಂದರಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೂವರು ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘೋರ ಘಟನೆ ನಡೆದಿದೆ. ಹತ್ತು ದಿನಗಳ ಹಿಂದೆ ಈ ಅಮಾನವೀಯ ಕೃತ್ಯ ನಡೆದಿದೆ ಎನ್ನಲಾಗಿದ್ದು, ಬಾಲಕಿ ತೀವ್ರ ಹೊಟ್ಟೆ ನೋವು ಎಂದು ಮನೆಗೆ ಮರಳಿದಾಗ ಈ ವಿಷಯ ಬೆಳಕಿಗೆ ಬಂದಿದೆ.
ಬಾಲಕಿಯ ತಾಯಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಸಾಕೀಬ್ ಎಂಬಾತ ತನ್ನ ಹೆಸರಲ್ಲಿ ರೆಸಾರ್ಟ್‌ನಲ್ಲಿ ರೂಮ್ ಬುಕಿಂಗ್ ಮಾಡಿದ್ದನೆಂಬುದು ತಿಳಿದುಬಂದಿದೆ. ಬಾಲಕಿಯ ಪರಿಚಿತನಾಗಿರುವ ಮತ್ತೊಬ್ಬ ಅಪ್ರಾಪ್ತ ಬಾಲಕ ಆಕೆಯನ್ನು ಆ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದ. ಆಕೆಯು ನಿರ್ಬಂಧಿತ ಸ್ಥಿತಿಯಲ್ಲಿದ್ದರೂ ಸಹ ಈ ಕೃತ್ಯಕ್ಕೆ ದಾಳಿಯಾಗಿದ್ದಾಳೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕೀಬ್ ಹಾಗೂ ಇನ್ನೊಬ್ಬ ಅಪ್ರಾಪ್ತ ಬಾಲಕನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಘಟನೆಗೆ ಸಂಬಂಸಿದಂತೆ ಪೊಲೀಸರೊಬ್ಬರ ಮಗನೂ ಭಾಗಿಯಾಗಿದ್ದಾನೆ ಎಂಬ ಆರೋಪದ ಮೇರೆಗೆ, ಆತ ಈಗಾಗಲೇ ತಲೆಮರೆಸಿಕೊಂಡಿದ್ದು, ಪೊಲೀಸರು ಅವನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…