Latest

ಲೈಂಗಿಕ ಶೋಷಣೆಯಿಂದ 15 ವರ್ಷದ ಬಾಲಕಿ ಗರ್ಭಿಣಿ; ಯೂಟ್ಯೂಬ್ ವಿಡಿಯೋ ನೋಡಿ ಮಗುವಿಗೆ ಜನ್ಮ ನೀಡಿ ಕೊಲೆ.

ಲೈಂಗಿಕ ಶೋಷಣೆಗೆ ಬಲಿಯಾದ 15 ವರ್ಷದ ಬಾಲಕಿಯೊಬ್ಬಳು ಯೂಟ್ಯೂಬ್ ವಿಡಿಯೋಗಳನ್ನು ನೋಡವ ಮೂಲಕ ತನ್ನ ಮನೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿ, ನಂತ್ರ ನವಜಾತ ಶಿಶುವನ್ನು ಕೊಂದ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ನಡೆದಿದೆ. ಸೋಷಿಯಲ್‌ ಮೀಡಿಯಾ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ. ಇದರಿಂದ ಬಾಲಕಿ ಗರ್ಭ ಧರಿಸಿದ್ದಾಳೆ. ಗೌಪ್ಯತೆಯನ್ನು ಕಾಪಾಡಿಕೊಳ್ಳಲು, ನನಗೆ ಕೆಲವು ಆರೋಗ್ಯ ಸಮಸ್ಯೆಗಳಿವೆ ಅಂತಾ ಹೇಳ್ಕೊಂಡು, ತಾಯಿಯಿಂದ ಬಾಲಕಿ ತನ್ನ ಹೊಟ್ಟೆಯ ಹುಬ್ಬನ್ನು ಮರೆಮಾಚುತ್ತಿದ್ದಳು.
ಅಂಬಾಜಾರಿ ಪ್ರದೇಶದ ನಿವಾಸಿಯಾದ ಬಾಲಕಿ ಮನೆಯವರಿಗೆ ಈ ವಿಷಯವನ್ನು ಹೇಳಲು ಹೆದರಿದ್ದಳು. ಹೀಗಾಗಿ, ಯೂಟ್ಯೂಬ್ ವೀಡಿಯೋಗಳನ್ನು ವೀಕ್ಷಿಸಲು ಪ್ರಾರಂಭಿಸಿದಳು. ಮಾರ್ಚ್ 2 ರಂದು ಬಾಲಕಿ ತನ್ನ ಮನೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಕ್ಷಣವೇ ನವಜಾತ ಶಿಶುವನ್ನು ಕತ್ತು ಹಿಸುಕಿ ಸಾಯಿಸಿ ಶವವನ್ನು ತನ್ನ ಮನೆಯ ಪೆಟ್ಟಿಗೆಯಲ್ಲಿ ಬಚ್ಚಿಟ್ಟಿದ್ದಳು. ಮನೆಗೆ ಮರಳಿದ ತಾಯಿ ಬಾಲಕಿಯ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಬಾಲಕಿ ತಾಯಿಗೆ ತನ್ನ ದುಃಖವನ್ನು ವಿವರಿಸಿದಳು. ನಂತರ ಅವಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ನವಜಾತ ಶಿಶುವಿನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.‌

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago