ಮುಂಬೈ: ವಾಣಿಜ್ಯ ನಗರಿ ಮುಂಬೈನ ಮಧ್ಯಭಾಗದಲ್ಲಿ ನಡೆದ ಭೀಕರ ಲೈಂಗಿಕ ದೌರ್ಜನ್ಯ ಪ್ರಕರಣವೊಂದು ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯ ಮೇಲೆ ಐವರು ಆರೋಪಿಗಳು ಮೂರು ತಿಂಗಳ ಅವಧಿಯಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಈ ಘಟನೆ ಕಲಾಚೌಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಭಾನುವಾರ ಪೊಲೀಸರು 25 ವರ್ಷದ ವ್ಯಕ್ತಿಯೊಬ್ಬನನ್ನು ಮತ್ತು ನಾಲ್ವರು ಬಾಲಾಪರಾಧಿಗಳನ್ನು ಬಂಧಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಆರೋಪಿಗಳಲ್ಲಿ ಒಬ್ಬನ ಗೆಳತಿ ಬಾಲಕಿಯ ಮನೆಗೆ ಬಂದು ತನ್ನ ಗೆಳೆಯನೊಂದಿಗೆ ಆಕೆಯ ಸಂಬಂಧದ ಬಗ್ಗೆ ವಿಚಾರಿಸಿದಾಗ ಪ್ರಕರಣ ಬಹಿರಂಗಗೊಂಡಿದೆ. ಬಳಿಕ ಬಾಲಕಿಯ ಪೋಷಕರು ಆಕೆಯ ಮೊಬೈಲ್ ಪರಿಶೀಲಿಸಿದಾಗ, ಆರೋಪಿಯೊಂದಿಗೆ ಆಕೆಯ ದೈಹಿಕ ಸಂಬಂಧಕ್ಕೆ ಸಂಬಂಧಿಸಿದ ವಿಡಿಯೋಗಳು ಮತ್ತು ಸಂದೇಶಗಳು ಪತ್ತೆಯಾಗಿವೆ.
ಘಟನೆಯ ಬಗ್ಗೆ ಪೋಷಕರು ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಐವರ ವಿರುದ್ಧ ಸಾಮೂಹಿಕ ಅತ್ಯಾಚಾರ, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಾಯ್ದೆ ಹಾಗೂ ಮಕ್ಕಳ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೊ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ಆರೋಪಿಗಳ ವಿರುದ್ಧ ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…
ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…
ಹಾವೇರಿ: ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಕೆಲಸ ಮಾಡಿಕೊಡಲು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಅಧಿಕಾರಿಯೊಬ್ಬರು ಲೋಕಾಯುಕ್ತ…
ನವದೆಹಲಿ: ತನ್ನ ಪ್ರಿಯಕರ ಮತ್ತೊಬ್ಬ ಮಹಿಳೆಯೊಂದಿಗೆ ತೆರಳಿದ್ದಾನೆ ಎಂದು ಆರೋಪಿಸಿ ದೆಹಲಿ ಮೂಲದ ಖ್ಯಾತ ಬ್ಲಾಗರ್ ಶ್ವೇತಾ ದ್ವಿವೇದಿ ಸಾಮಾಜಿಕ…
ಬಳ್ಳಾರಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಿಜವಾದ ಜಮೀನು ಮಾಲೀಕರ ಹೆಸರನ್ನು ದುರುಪಯೋಗಪಡಿಸಿಕೊಂಡು ಸುಮಾರು ₹1.08 ಕೋಟಿ ಮೌಲ್ಯದ ಜಮೀನನ್ನು ವಂಚನೆಯಿಂದ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಮಹತ್ವದ ಹಂತ ತಲುಪಿದೆ. ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ರಾವ್ ಮಾಫಿ…