ಮಹಾರಾಷ್ಟ್ರದ ನವಿ ಮುಂಬೈನಲ್ಲಿ 15 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಾಲಾ ವ್ಯಾನ್ ಚಾಲಕನನ್ನು ಬಂಧಿಸಲಾಗಿದೆ. ಈ ಬಗ್ಗೆ ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ.
ಮಾರ್ಚ್ 3 ರಂದು ಪನ್ವೇಲ್‌ನಲ್ಲಿ ಈ ಘಟನೆ ನಡೆದಿದೆ. ಶಾಲೆಗೆ ತೆರಳುತ್ತಿದ್ದ ಬಾಲಕಿಯನ್ನು ಆರೋಪಿಯು ಆಮಿಷವೊಡ್ಡಿ ತನ್ನ ವ್ಯಾನ್‌ನಲ್ಲಿ ಕೂರಿಸಿಕೊಂಡು, ಚಿಂಚವಲಿ ಶಿವರಾದ ಎಂಬ ಎಕಾಂತ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೀಡಿತ ಬಾಲಕಿ ಈ ಬಗ್ಗೆ ಪೋಷಕರಿಗೆ ತಿಳಿಸಿದ್ದಾಳೆ, ಅವರ ದೂರು ಹಿನ್ನೆಲೆಯಲ್ಲಿ ಪೊಲೀಸರು ಕೂಡಲೇ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಗುರುವಾರ, ಭಾರತೀಯ ದಂಡ ಸಂಹಿತೆ ಹಾಗೂ ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಈ ಪ್ರಕರಣದಲ್ಲಿ ಬಂಧಿತನನ್ನು ಮಾರ್ಚ್ 18ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ನಗರದ ವಿಲ್ಸನ್ ಗಾರ್ಡನ್ 9ನೇ ಮುಖ್ಯ ರಸ್ತೆಯಲ್ಲಿ ಭಯಾನಕ ಅಪಘಾತ ಸಂಭವಿಸಿದ್ದು, ಬ್ರೇಕ್ ಫೇಲ್ ಆದ ಆಯಂಬುಲೆನ್ಸ್‍ವೊಂದು ತರಕಾರಿ…
ಮಂಗಳೂರು: ಕಾವೂರು ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ತಲವಾರು ತೋರಿಸಿ ಇಬ್ಬರು ನಾಗರಿಕರನ್ನು ಬೆದರಿಸಿರುವ ಘಟನೆ ವರದಿಯಾಗಿದೆ. ಸಂಘಪರಿವಾರದ ಕಾರ್ಯಕರ್ತ…
ಬೆಂಗಳೂರು: ನಗರದ ಟಿ. ದಾಸರಹಳ್ಳಿಯ ಭುವನೇಶ್ವರಿ ನಗರದಲ್ಲಿ ನಡು ರಸ್ತೆಯಲ್ಲೇ ಯುವತಿಯೊಬ್ಬರ ಕೈ ಹಿಡಿದು ಕಿರುಕುಳ ನೀಡಿದ ಯುವಕನ ವಿರುದ್ದ…
ರಾಯಚೂರು: ಇತ್ತೀಚೆಗೆ ಉದ್ಘಾಟನೆಯಾದ ನೂತನ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಬಂದಿದೆ ಎಂಬ ಇಮೇಲ್ ಸಂದೇಶ one ಆತಂಕದ ವಾತಾವರಣ…
ಉಡುಪಿ: ಅಕ್ರಮ ಮರಳು ಸಾಗಣೆಯನ್ನು ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ ನಡೆದ ಘಟನೆ ಉಡುಪಿ ಜಿಲ್ಲೆಯ ಸಾಲಿಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ್…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಾ ಗ್ರಾಮದಲ್ಲಿ ಪತ್ನಿಯ ಮೇಲೆ ಅನೈತಿಕ ಸಂಬಂಧ ಹೊಂದಿರುವ ಶಂಕೆಯಿಂದ ವ್ಯಕ್ತಿಯೋರ್ವ ಆಕೆಯನ್ನೂ…