Categories: CorruptionLatest

ದೇಶಭಕ್ತನ ಮುಖವಾಡದ ಹಿಂದೆ ₹150 ಕೋಟಿ ಅಕ್ರಮ ಆಸ್ತಿ! ಎಸಿಬಿ ದಾಳಿಯಲ್ಲಿ ಸರ್ಕಾರಿ ಎಂಜಿನಿಯರ್ ಬಂಡವಾಳ ಬಯಲು

ಸಾಮಾಜಿಕ ಜಾಲತಾಣಗಳಲ್ಲಿ ತಾನೊಬ್ಬ ದೇಶಭಕ್ತ, ಪ್ರಾಮಾಣಿಕ ಹಾಗೂ ನೈತಿಕ ವ್ಯಕ್ತಿ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದ ತೆಲಂಗಾಣದ ಸರ್ಕಾರಿ ಎಂಜಿನಿಯರ್‌ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ACB) ನಡೆಸಿದ ದಾಳಿಯಲ್ಲಿ ಅಚ್ಚರಿಯ ಸಂಗತಿಗಳು ಬೆಳಕಿಗೆ ಬಂದಿವೆ. ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದ್ದು, ಅಧಿಕಾರಿಯ ದ್ವಿಮುಖ ವ್ಯಕ್ತಿತ್ವ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ವೈರಲ್ ಆಗಿರುವ ಮಾಹಿತಿಯ ಪ್ರಕಾರ, ಈ ಎಂಜಿನಿಯರ್ ತಮ್ಮ ವಾಟ್ಸಾಪ್‌ ಡಿಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಇಟ್ಟುಕೊಂಡಿದ್ದು, ಇನ್‌ಸ್ಟಾಗ್ರಾಮ್‌ ಬಯೋದಲ್ಲಿ ತಾನೊಬ್ಬ “ರಾಷ್ಟ್ರವಾದಿ” ಎಂದು ಉಲ್ಲೇಖಿಸಿದ್ದರು. ಅಷ್ಟೇ ಅಲ್ಲದೆ, ಕಳೆದ ವರ್ಷ ವಿಶ್ವವಿದ್ಯಾನಿಲಯವೊಂದು ಅವರನ್ನು “ನೈತಿಕತೆ ಮತ್ತು ಪ್ರಾಮಾಣಿಕತೆ” ವಿಷಯದ ಕುರಿತು ಉಪನ್ಯಾಸ ನೀಡಲು ಮುಖ್ಯ ಅತಿಥಿಯಾಗಿ ಆಹ್ವಾನಿಸಿತ್ತು ಎನ್ನಲಾಗಿದೆ. ಆದರೆ, ಎಸಿಬಿ ದಾಳಿಯ ಬಳಿಕ ಅವರ ಈ ಸಾರ್ವಜನಿಕ ಇಮೇಜ್‌ಗೆ ಸಂಪೂರ್ಣ ವಿರುದ್ಧವಾದ ಚಿತ್ರಣ ಹೊರಬಿದ್ದಿದೆ.

ಖಚಿತ ಮಾಹಿತಿ ಆಧರಿಸಿ ಅಧಿಕಾರಿಯ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಸುಮಾರು ₹150 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆಹಚ್ಚಿದ್ದಾರೆ ಎಂದು ವರದಿಯಾಗಿದೆ. ದಾಳಿಯಲ್ಲಿ ನಾಲ್ಕು ಐಷಾರಾಮಿ ಫ್ಲ್ಯಾಟ್‌ಗಳು, ಸುಮಾರು 2 ಕೆಜಿ ಚಿನ್ನ ಸೇರಿದಂತೆ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಹೊರಗೆ ದೇಶಭಕ್ತಿ ಮತ್ತು ನೈತಿಕತೆಯ ಬಗ್ಗೆ ಮಾತನಾಡಿ, ಒಳಗಡೆ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆಯೇ ಎಂಬ ಪ್ರಶ್ನೆಗಳನ್ನು ನೆಟ್ಟಿಗರು ಎತ್ತುತ್ತಿದ್ದಾರೆ. ತನಿಖೆ ಮುಂದುವರಿದಿದ್ದು, ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

13 hours ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

13 hours ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

4 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

4 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago