ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜ್ಯೋತಿನಗರದಲ್ಲಿ ಮದುವೆಯಾಗಿ ಕೇವಲ ನಾಲ್ಕು ತಿಂಗಳಾದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿದ ಯುವತಿ ಪೃಥ್ವಿರಾಣಿ (20). ಶಿರಾ ತಾಲೂಕಿನ ಬುಕಾಪಟ್ಟದ ಮೂಲದ ಆಕೆ, ಕಿಲಾರ್ಧಹಳ್ಳಿಯ ಜೈಮಾರುತಿ ನಾಯಕ್‌ನನ್ನು ಪ್ರೀತಿಸುತ್ತಿದ್ದರು. ಸುಮಾರು ನಾಲ್ಕು ವರ್ಷಗಳ ಕಾಲ ಪ್ರೀತಿಸಿದ ಬಳಿಕ, ಇತ್ತೀಚೆಗೆ ಧರ್ಮಸ್ಥಳದಲ್ಲಿ ವಿವಾಹವಾದರು. ಮದುವೆಯ ನಂತರ ದಂಪತಿ ಶಿರಾದ ಜ್ಯೋತಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.
ಪತಿಯ ಜೊತೆಗಿನ ಬೇರೆ ಯುವತಿಯ ಜಗಳ
ಮದುವೆಯಾದ ನಂತರ ಜೈಮಾರುತಿ ನಾಯಕ್‌ನ ಜೀವನದಲ್ಲಿ ಮತ್ತೊಬ್ಬ ಯುವತಿ ಪ್ರತ್ಯಕ್ಷವಾಗಿದ್ದಾಳೆ. ಆಕೆ “ನನ್ನನ್ನ ಪ್ರೀತಿಸಿ, ಈಗ ಬೇರೆ ಹುಡುಗಿಯನ್ನು ಮದುವೆಯಾಗಿದ್ದೀಯಾ” ಎಂದು ಜೈಮಾರುತಿಗೆ ಪದೇಪದೇ ಜಗಳವಾಡುತ್ತಿದ್ದಳು. ಅಲ್ಲದೆ ಬೆದರಿಕೆ ಹಾಕುತ್ತಿದ್ದುದರಿಂದ, ಈ ವಿಚಾರ ದಂಪತಿಯ ಮಧ್ಯೆ ಅನೇಕ ಬಾರಿ ತೀವ್ರ ವಾಗ್ವಾದಕ್ಕೂ ಕಾರಣವಾಗಿತ್ತು. ಪತಿಯೊಂದಿಗೆ ಜಗಳದ ವೇಳೆ ಹಲ್ಲೆಯ ಘಟನೆ ನಡೆದಿದ್ದರೂ ಎಂಬ ಆರೋಪವಿದೆ.
ಶವ ಪತ್ತೆಯಾದಾಗ ಹುಟ್ಟಿದ ಅನುಮಾನ
ಇತ್ತೀಚೆಗೆ ಪೃಥ್ವಿರಾಣಿ ತಮ್ಮ ತವರಿನವರೊಂದಿಗೆ ಸಂಪರ್ಕದಲ್ಲಿರದೆ ಇದ್ದ ಹಿನ್ನೆಲೆಯಲ್ಲಿ, ಜೈಮಾರುತಿಯ ಕುಟುಂಬದವರು ಕರೆಮಾಡಿ “ನಿಮ್ಮ ಮಗಳು ಮಾತನಾಡುತ್ತಿಲ್ಲ” ಎಂದು ತಿಳಿಸಿದ್ದಾರೆ. ತವರು ಮನೆಯಿಂದ ಬಂದ ಪೋಷಕರು ಮನೆಯೊಳಗೆ ಪ್ರವೇಶಿಸಿದಾಗ, ಪೃಥ್ವಿರಾಣಿ ಮಂಚದ ಮೇಲೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕುತ್ತಿಗೆಯ ಮೇಲೆ ಕಪ್ಪು ಗುರುತುಗಳು ಹಾಗೂ ಮೂಗಿನಿಂದ ರಕ್ತಸ್ರಾವ ಕಂಡ ಹಿನ್ನೆಲೆಯಲ್ಲಿ, ಆಕೆಯ ಪೋಷಕರು ಸಾವಿನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಪ್ರಕರಣ ದಾಖಲಾದ ಹಿನ್ನಲೆ
ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಪೋಷಕರ ಅನುಮಾನ ಹಿನ್ನೆಲೆಯಲ್ಲಿ ಪತಿ ಜೈಮಾರುತಿ ನಾಯಕ್‌ರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಪತಿಗೆ ಬೆದರಿಕೆ ಹಾಕುತ್ತಿದ್ದ ಮತ್ತೊಬ್ಬ ಯುವತಿಯನ್ನೂ ಪೊಲೀಸರು ಶೀಘ್ರ ವಿಚಾರಣೆ ಮಾಡುವ ಸಾಧ್ಯತೆ ಇದೆ.
ಈ ಘಟನೆ ಜ್ಯೋತಿನಗರದಲ್ಲಿ ಆತಂಕ ಮೂಡಿಸಿದ್ದು, ಯುವತಿ ಸಾವಿನ ನಿಜ ಕಾರಣ ಪತ್ತೆಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…
ಚಿತ್ರದುರ್ಗ: ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮದ ಹತ್ತಿರ ನಡೆದ ವಿಶಿಷ್ಟ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಸಾಧುಗಳ ವೇಷ ತಾಳಿ ರೈತರ…
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…