Latest

ಪತಿಯ ಅತಿಯಾದ ಸಲುಗೆಯಿಂದ ಮನನೊಂದು 20 ವರ್ಷದ ಪತ್ನಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜ್ಯೋತಿನಗರದಲ್ಲಿ ಮದುವೆಯಾಗಿ ಕೇವಲ ನಾಲ್ಕು ತಿಂಗಳಾದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿದ ಯುವತಿ ಪೃಥ್ವಿರಾಣಿ (20). ಶಿರಾ ತಾಲೂಕಿನ ಬುಕಾಪಟ್ಟದ ಮೂಲದ ಆಕೆ, ಕಿಲಾರ್ಧಹಳ್ಳಿಯ ಜೈಮಾರುತಿ ನಾಯಕ್‌ನನ್ನು ಪ್ರೀತಿಸುತ್ತಿದ್ದರು. ಸುಮಾರು ನಾಲ್ಕು ವರ್ಷಗಳ ಕಾಲ ಪ್ರೀತಿಸಿದ ಬಳಿಕ, ಇತ್ತೀಚೆಗೆ ಧರ್ಮಸ್ಥಳದಲ್ಲಿ ವಿವಾಹವಾದರು. ಮದುವೆಯ ನಂತರ ದಂಪತಿ ಶಿರಾದ ಜ್ಯೋತಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ಪತಿಯ ಜೊತೆಗಿನ ಬೇರೆ ಯುವತಿಯ ಜಗಳ

ಮದುವೆಯಾದ ನಂತರ ಜೈಮಾರುತಿ ನಾಯಕ್‌ನ ಜೀವನದಲ್ಲಿ ಮತ್ತೊಬ್ಬ ಯುವತಿ ಪ್ರತ್ಯಕ್ಷವಾಗಿದ್ದಾಳೆ. ಆಕೆ “ನನ್ನನ್ನ ಪ್ರೀತಿಸಿ, ಈಗ ಬೇರೆ ಹುಡುಗಿಯನ್ನು ಮದುವೆಯಾಗಿದ್ದೀಯಾ” ಎಂದು ಜೈಮಾರುತಿಗೆ ಪದೇಪದೇ ಜಗಳವಾಡುತ್ತಿದ್ದಳು. ಅಲ್ಲದೆ ಬೆದರಿಕೆ ಹಾಕುತ್ತಿದ್ದುದರಿಂದ, ಈ ವಿಚಾರ ದಂಪತಿಯ ಮಧ್ಯೆ ಅನೇಕ ಬಾರಿ ತೀವ್ರ ವಾಗ್ವಾದಕ್ಕೂ ಕಾರಣವಾಗಿತ್ತು. ಪತಿಯೊಂದಿಗೆ ಜಗಳದ ವೇಳೆ ಹಲ್ಲೆಯ ಘಟನೆ ನಡೆದಿದ್ದರೂ ಎಂಬ ಆರೋಪವಿದೆ.

ಶವ ಪತ್ತೆಯಾದಾಗ ಹುಟ್ಟಿದ ಅನುಮಾನ

ಇತ್ತೀಚೆಗೆ ಪೃಥ್ವಿರಾಣಿ ತಮ್ಮ ತವರಿನವರೊಂದಿಗೆ ಸಂಪರ್ಕದಲ್ಲಿರದೆ ಇದ್ದ ಹಿನ್ನೆಲೆಯಲ್ಲಿ, ಜೈಮಾರುತಿಯ ಕುಟುಂಬದವರು ಕರೆಮಾಡಿ “ನಿಮ್ಮ ಮಗಳು ಮಾತನಾಡುತ್ತಿಲ್ಲ” ಎಂದು ತಿಳಿಸಿದ್ದಾರೆ. ತವರು ಮನೆಯಿಂದ ಬಂದ ಪೋಷಕರು ಮನೆಯೊಳಗೆ ಪ್ರವೇಶಿಸಿದಾಗ, ಪೃಥ್ವಿರಾಣಿ ಮಂಚದ ಮೇಲೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕುತ್ತಿಗೆಯ ಮೇಲೆ ಕಪ್ಪು ಗುರುತುಗಳು ಹಾಗೂ ಮೂಗಿನಿಂದ ರಕ್ತಸ್ರಾವ ಕಂಡ ಹಿನ್ನೆಲೆಯಲ್ಲಿ, ಆಕೆಯ ಪೋಷಕರು ಸಾವಿನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಪ್ರಕರಣ ದಾಖಲಾದ ಹಿನ್ನಲೆ

ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಪೋಷಕರ ಅನುಮಾನ ಹಿನ್ನೆಲೆಯಲ್ಲಿ ಪತಿ ಜೈಮಾರುತಿ ನಾಯಕ್‌ರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಪತಿಗೆ ಬೆದರಿಕೆ ಹಾಕುತ್ತಿದ್ದ ಮತ್ತೊಬ್ಬ ಯುವತಿಯನ್ನೂ ಪೊಲೀಸರು ಶೀಘ್ರ ವಿಚಾರಣೆ ಮಾಡುವ ಸಾಧ್ಯತೆ ಇದೆ.

ಈ ಘಟನೆ ಜ್ಯೋತಿನಗರದಲ್ಲಿ ಆತಂಕ ಮೂಡಿಸಿದ್ದು, ಯುವತಿ ಸಾವಿನ ನಿಜ ಕಾರಣ ಪತ್ತೆಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

nazeer ahamad

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

14 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

18 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago