Categories: JobsLatest

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಗಳಲ್ಲೇ ಹೆಚ್ಚಿನ ಕೊರತೆ

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ ಅನ್ನಪೂರ್ಣ ಈ. ಅವರ ಪ್ರಶ್ನೆಗೆ ಸರ್ಕಾರ ನೀಡಿದ ಉತ್ತರದ ಪ್ರಕಾರ, ರಾಜ್ಯದ 45 ಇಲಾಖೆಗಳಲ್ಲಿನ ಒಟ್ಟು 2,84,881 ಹುದ್ದೆಗಳು ಖಾಲಿ ಇರುವುದಾಗಿ ತಿಳಿದುಬಂದಿದೆ.

ಇದರಲ್ಲಿನ 96,844 ಹುದ್ದೆಗಳು ಗುತ್ತಿಗೆ ಅಥವಾ ಹೊರಗುತ್ತಿಗೆಯ ಮೂಲಕ ಭರ್ತಿಯಾಗಿದ್ದು, ನಿವ್ವಳವಾಗಿ 1,88,037 ಹುದ್ದೆಗಳು ಇನ್ನೂ ಖಾಲಿಯೇ ಉಳಿದಿವೆ.

ಖಾಲಿ ಹುದ್ದೆಗಳ ಪ್ರಮಾಣ ಹೆಚ್ಚು ಇರುವ ಇಲಾಖೆಗಳಲ್ಲಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಮೊದಲ ಸ್ಥಾನದಲ್ಲಿದ್ದು, ಇಲ್ಲಿ 79,694 ಹುದ್ದೆಗಳು ಖಾಲಿ ಇದ್ದು, ಅವುಗಳಲ್ಲಿ 79,486 ನಿವ್ವಳ ಖಾಲಿ ಹುದ್ದೆಗಳಾಗಿವೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,572 ಹುದ್ದೆಗಳು ಖಾಲಿ ಇದ್ದು, 10,324 ನಿವ್ವಳ ಖಾಲಿ ಹುದ್ದೆಗಳಿವೆ. ಒಳಾಡಳಿತ (ಪೊಲೀಸ್) ಇಲಾಖೆಯಲ್ಲಿ 28,188 ಹುದ್ದೆಗಳ ಪೈಕಿ 26,618 ಹುದ್ದೆಗಳು ಇನ್ನೂ ಭರ್ತಿಯಾಗಬೇಕಿದೆ.

ಇದರ ಜೊತೆಗೆ ಉನ್ನತ ಶಿಕ್ಷಣ ಇಲಾಖೆಯಲ್ಲಿ 13,599 ಹುದ್ದೆಗಳು (10,875 ನಿವ್ವಳ ಖಾಲಿ), ಕಂದಾಯ ಇಲಾಖೆಯಲ್ಲಿ 10,867 ಹುದ್ದೆಗಳು (ಕೆಲವು ಹುದ್ದೆಗಳು ಗುತ್ತಿಗೆ ಮೂಲಕ ಭರ್ತಿಯಾಗಿರುವ ಕಾರಣ ನಿವ್ವಳ ಸಂಖ್ಯೆಯಲ್ಲಿ ವ್ಯತ್ಯಾಸ ಕಂಡುಬಂದಿದೆ) ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ 10,504 ಹುದ್ದೆಗಳು ಖಾಲಿ ಇದ್ದು, 7,760 ನಿವ್ವಳ ಹುದ್ದೆಗಳು ಉಳಿದಿವೆ.

ಹುದ್ದೆಗಳ ವರ್ಗೀಕರಣವನ್ನು ಗಮನಿಸಿದರೆ, ‘ಸಿ’ ವೃಂದದ ಹುದ್ದೆಗಳೇ ಅತ್ಯಧಿಕವಾಗಿದ್ದು, 1,72,190 ಹುದ್ದೆಗಳು ಖಾಲಿಯಾಗಿದೆ. ‘ಡಿ’ ವೃಂದದಲ್ಲಿ 79,340, ‘ಬಿ’ ವೃಂದದಲ್ಲಿ 17,180 ಹಾಗೂ ‘ಎ’ ವೃಂದದಲ್ಲಿ 16,171 ಹುದ್ದೆಗಳು ಖಾಲಿ ಇರುವುದಾಗಿ ಮಾಹಿತಿ ನೀಡಲಾಗಿದೆ.

ಈ ಅಂಕಿ-ಅಂಶಗಳು ರಾಜ್ಯದಲ್ಲಿ ಉದ್ಯೋಗಾವಕಾಶಗಳ ದೊಡ್ಡ ಪ್ರಮಾಣವನ್ನು ತೋರಿಸುತ್ತಿದ್ದು, ಈ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳುವ ಅಗತ್ಯತೆ ಮತ್ತಷ್ಟು ಸ್ಪಷ್ಟವಾಗಿದೆ.

ಭ್ರಷ್ಟರ ಬೇಟೆ

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago