Categories: CorruptionLatest

ಜಾಮೀನು ಪಡೆದ ವ್ಯಕ್ತಿಯ ಹಾಜರಾತಿಗೆ ₹3 ಸಾವಿರ ಲಂಚ: ಲೋಕಾಯುಕ್ತ ಬಲೆಗೆ ಪೊಲೀಸ್ ಕಾನ್‌ಸ್ಟೆಬಲ್

ಕಲಬುರಗಿ: ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸಲು ₹3 ಸಾವಿರ ಲಂಚ ಸ್ವೀಕರಿಸಿದ ಆರೋಪದ ಮೇಲೆ ಸುಲೇಪೇಟ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಅನಿಲ್ ಕುಮಾರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಚಿಂಚೋಳಿ ತಾಲೂಕಿನ ಸುಲೇಪೇಟ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಕೇಶ್ವರ ಗ್ರಾಮದ ಚಂದ್ರಕಾಂತ ರಂಗನೂರು ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕಾನ್‌ಸ್ಟೆಬಲ್ ಅನಿಲ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ದೂರುದಾರ ಚಂದ್ರಕಾಂತ ರಂಗನೂರು ಅವರು ನ್ಯಾಯಾಲಯದಿಂದ ಜಾಮೀನು ಪಡೆದಿದ್ದು, ನ್ಯಾಯಾಲಯದ ಆದೇಶದಂತೆ ಪ್ರತಿ ತಿಂಗಳು ಸುಲೇಪೇಟ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಹಾಜರಾಗಿ ಸಹಿ ಮಾಡುವಂತೆ ಸೂಚಿಸಲಾಗಿತ್ತು ಎನ್ನಲಾಗಿದೆ.

ಆದರೆ, ಠಾಣೆಯ ರೈಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‌ಸ್ಟೆಬಲ್ ಅನಿಲ್ ಕುಮಾರ್ ಅವರು ನ್ಯಾಯಾಲಯದ ಆದೇಶಕ್ಕಿಂತ ಹೆಚ್ಚಾಗಿ ಪ್ರತಿ ಭಾನುವಾರ ಠಾಣೆಗೆ ಬಂದು ಹಾಜರಾತಿ ದಾಖಲಿಸಿಕೊಳ್ಳುವಂತೆ ದೂರುದಾರರಿಗೆ ಸೂಚಿಸಿದ್ದರು ಎನ್ನಲಾಗಿದೆ.

ಪ್ರತಿ ಭಾನುವಾರ ಠಾಣೆಗೆ ಹಾಜರಾಗದಿದ್ದರೆ ಜಾಮೀನು ರದ್ದುಪಡಿಸಿ ಮತ್ತೆ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಕುರಿತು ಚಂದ್ರಕಾಂತ ರಂಗನೂರು ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಕಾನ್‌ಸ್ಟೆಬಲ್ ಅನಿಲ್ ಕುಮಾರ್ ಅವರನ್ನು ಬಲೆಗೆ ಬೀಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್‌ಗೆ ಬ್ರೇಕ್: ಯಜಮಾನಿಯ ಹೆಸರಿನಲ್ಲೇ ಸಿಮ್ ಕಡ್ಡಾಯ

ಮದ್ದೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ಹಾಗೂ ನಕಲಿ ಫಲಾನುಭವಿಗಳನ್ನು ತಡೆಯುವ ಉದ್ದೇಶದಿಂದ ಸರ್ಕಾರ ಮತ್ತಷ್ಟು ಕಟ್ಟುನಿಟ್ಟಿನ…

9 hours ago

ಕೆಎಸ್‌ಆರ್‌ಟಿಸಿ ಬಸ್ ತಡೆದು ಸಿಬ್ಬಂದಿ ಮೇಲೆ ಹಲ್ಲೆ: 24 ಗಂಟೆಯೊಳಗೆ ಮೂವರು ಆರೋಪಿಗಳ ಬಂಧನ

ಸಿದ್ದಾಪುರ: ಕೆಎಸ್‌ಆರ್‌ಟಿಸಿ ಬಸ್‌ಗೆ ದಾರಿ ಬಿಡುವ ವಿಚಾರವಾಗಿ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ, ಕರ್ತವ್ಯ ನಿರತ ಚಾಲಕ ಹಾಗೂ ಕಂಡಕ್ಟರ್…

9 hours ago

“ಸೀಕ್ರೆಟ್ ಗರ್ಲ್‌ಫ್ರೆಂಡ್ ಆಗು, ಒಳ್ಳೆ ಅವಕಾಶ ಕೊಡ್ತೀನಿ” – 70ರ ಹರೆಯದ ನಿರ್ಮಾಪಕನ ಕರಾಳ ಮುಖ ಬಿಚ್ಚಿಟ್ಟ ನಟಿ ಯುಕ್ತಿ ಕಪೂರ್!

ಮುಂಬೈ: ಚಿತ್ರರಂಗದ ಗ್ಲಾಮರ್ ಜಗತ್ತಿನ ಹಿಂದೆ ಅಡಗಿರುವ ಕಹಿ ಸತ್ಯಗಳನ್ನು ಹಲವು ನಟಿಯರು ಬಹಿರಂಗಪಡಿಸುತ್ತಲೇ ಬಂದಿದ್ದಾರೆ. ಇದೀಗ ಕಿರುತೆರೆ ಹಾಗೂ…

3 days ago

ಗರ್ಭಿಣಿ ಪತ್ನಿಯನ್ನು ಬಿಟ್ಟು ಪ್ರೇಯಸಿ ಜೊತೆ ಎಸ್ಕೇಪ್! 7 ವರ್ಷಗಳ ಬಳಿಕ ಇನ್‌ಸ್ಟಾ ರೀಲ್ಸ್‌ನಿಂದ ಸಿಕ್ಕಿಬಿದ್ದ ಪತಿ!

ಹರ್ದೋಯಿ/ಲೂಧಿಯಾನ: ಗರ್ಭಿಣಿ ಪತ್ನಿಯನ್ನು ಬಿಟ್ಟು ಪ್ರೇಯಸಿ ಜೊತೆ ಓಡಿಹೋಗಿ, ಮತ್ತೊಂದು ಮದುವೆಯಾಗಿ ಹೊಸ ಸಂಸಾರ ಹೂಡಿದ್ದ ವ್ಯಕ್ತಿಯೊಬ್ಬ ಬರೋಬ್ಬರಿ ಏಳು…

3 days ago

ಸೆಕ್ಸ್ ಟಿಪ್ಸ್ ನೀಡುತ್ತಿದ್ದ ಮಹಿಳೆಯರೇ ಟಾರ್ಗೆಟ್! ನಕಲಿ ಖಾತೆ ಸೃಷ್ಟಿಸಿ ಲಕ್ಷಾಂತರ ರೂ. ವಂಚನೆ; ಆರೋಪಿ ಅರೆಸ್ಟ್

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸೆಕ್ಸ್ ಟಿಪ್ಸ್ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು, ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ…

3 days ago

₹4,000 ಪಡೆದು ಅರ್ಧ ಗಂಟೆಯಲ್ಲೇ ಎಸ್ಕೇಪ್! ಪೇಂಟರ್‌ನ ಕೈಚಳಕ ಕಂಡು ಶಾಕ್ ಆದ ಮುಂಬೈ ಯುವತಿ

ಮುಂಬೈ: ನಂಬಿಕೆಯಿಂದ ಕೋಣೆಗೆ ಬಣ್ಣ ಬಳಿಯಲು ಕರೆಸಿಕೊಂಡ ಪೇಂಟರ್‌ನ ಕಳಪೆ ಕೆಲಸ ಕಂಡು ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಯುವತಿಯೊಬ್ಬಳು…

3 days ago