ರಾಜ್ಯದಲ್ಲಿ ಮರುಕಳಿಸಿರುವ ಪೈಶಾಚಿಕ ಘಟನೆ ಮತ್ತೊಮ್ಮೆ ಮಾನವೀಯತೆಯ ಮೌಲ್ಯಗಳನ್ನು ಪ್ರಶ್ನೆಗೆಡಿಸುತ್ತಿದೆ. 16 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳನ್ನು ನಿರಂತರವಾಗಿ ಅತ್ಯಾಚಾರಕ್ಕೊಳಪಡಿಸಿದ ಪ್ರಕರಣದಲ್ಲಿ 31 ವರ್ಷದ ಧನಂಜಯ್ ಎಂಬಾತನನ್ನು ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ ಬಾಲಕಿಯ ತಾಯಿಯ ಸ್ನೇಹಿತೆಯ ಮನೆಯಲ್ಲಿ ಘಟನೆ ಆರುಂಭವಾಗಿದೆ. ಧನಂಜಯ್ ಬಾಲಕಿಯ ಖಾಸಗಿ ಫೋಟೋಗಳು ಹಾಗೂ ವೀಡಿಯೋಗಳನ್ನು ಬಳಸಿಕೊಂಡು ಆಕೆಯನ್ನು ಬ್ಲಾಕ್‌ಮೇಲ್ ಮಾಡಿದ್ದಾನೆ. ಬೆದರಿಕೆ ನೀಡಿದ ಆರೋಪಿಯು ಆಕೆಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದು, ನಂತರ ಸಕಲೇಶಪುರದ ತೋಟವೊಂದರಲ್ಲಿ ಬಚ್ಚಿಟ್ಟು, ಅನೇಕ ದಿನಗಳವರೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರಿಂದ ತಿಳಿದುಬಂದಿದೆ.
ಈ ಕ್ರೂರತೆಯಿಂದ ಬಳಲಿದ ಬಾಲಕಿ ಕೊನೆಗೆ ಪೋಷಕರಿಗೆ ಘಟನೆ ಬಗ್ಗೆಯಾಗಿ ಹೇಳಿದ ನಂತರ, ಅವರು ತಕ್ಷಣವೇ ಸೋಲದೇವನಹಳ್ಳಿ ಠಾಣೆಗೆ ದೂರು ಸಲ್ಲಿಸಿದರು. ವೈದ್ಯಕೀಯ ಪರೀಕ್ಷೆಯಲ್ಲಿಯೂ ಅತ್ಯಾಚಾರ ದೃಢಪಟ್ಟಿದೆ.
ಪೊಲೀಸರು ಆರೋಪಿಯನ್ನು ಬಂಧಿಸಿ, ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. ಈ ಘಟನೆ ಮಗುಗಳ ಭದ್ರತೆ ಮತ್ತು ಸಮಾಜದ ಜವಾಬ್ದಾರಿಯ ಬಗ್ಗೆ ಮತ್ತೊಮ್ಮೆ ಗಂಭೀರ ಚಿಂತನೆಗೆ ಕಾರಣವಾಗಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…