Categories: CrimeLatest

37ರ ಆಂಟಿ–22ರ ಯುವಕನೊಂದಿಗೆ ಪರಾರಿ: ಮಗನನ್ನು ಬಿಟ್ಟು ಓಡಿಹೋದ ತಾಯಿ, ಈಗ ಜೀವಭಯದಿಂದ ಪೊಲೀಸರ ಮೊರೆ..!

ಪ್ರೀತಿಗೆ ವಯಸ್ಸಿನ ಅಂತರ ಅಡ್ಡಿಯಾಗುವುದಿಲ್ಲ ಎಂಬ ಮಾತು ಮತ್ತೊಮ್ಮೆ ಸತ್ಯವಾಗಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. 37 ವರ್ಷದ ಮಹಿಳೆ, ತನ್ನಿಗಿಂತ 15 ವರ್ಷ ಕಿರಿಯ 22 ವರ್ಷದ ಯುವಕನ ಜೊತೆ ಪ್ರೀತಿಯಲ್ಲಿ ಬಿದ್ದು, ಮನೆ ಬಿಟ್ಟು ಪರಾರಿಯಾಗಿ ಮದುವೆಯಾಗಿರುವುದು ಗಮನ ಸೆಳೆದಿದೆ.

ಬೆಂಗಳೂರಿನ ಚಲ್ಲಘಟ್ಟ ನಿವಾಸಿ ಕವಿತಾ ಹಾಗೂ ಮೈಸೂರಿನ ರಮ್ಮನಹಳ್ಳಿ ಮೂಲದ ಭಾಸ್ಕರ್ ನಡುವೆ ಪರಿಚಯ ಪ್ರೀತಿಗೆ ತಿರುಗಿದದ್ದು ದೇವಸ್ಥಾನ ಭೇಟಿಗಳ ವೇಳೆ ಎಂದು ತಿಳಿದುಬಂದಿದೆ. ಆಟೋ ಚಾಲಕನಾಗಿದ್ದ ಭಾಸ್ಕರ್, ಕವಿತಾ ಹಾಗೂ ಆಕೆಯ ತಾಯಿ ಭಾಗ್ಯಮ್ಮಳನ್ನು ದೇವಸ್ಥಾನಗಳಿಗೆ ಕರೆದುಕೊಂಡು ಹೋಗುತ್ತಿದ್ದಾಗ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು.

ಇದಕ್ಕೂ ಮುನ್ನವೇ ಕವಿತಾ ವಿವಾಹಿತೆಯಾಗಿದ್ದು, ಎಂಟು ವರ್ಷಗಳ ಹಿಂದೆ ಗಂಡ ಮೃತಪಟ್ಟಿದ್ದಾನೆ. ಈ ದಂಪತಿಗೆ 14 ವರ್ಷದ ಮಗನಿದ್ದಾನೆ. ಗಂಡನ ಸಾವಿನ ನಂತರ ಹೌಸ್‌ಕೀಪಿಂಗ್ ಕೆಲಸ ಮಾಡುತ್ತಾ ತವರು ಮನೆಯಲ್ಲೇ ವಾಸಿಸುತ್ತಿದ್ದ ಕವಿತಾ, ಈಗ ಪ್ರೇಮಿಗಾಗಿ ಮಗನನ್ನೇ ಬಿಟ್ಟು ಮನೆ ತೊರೆದಿದ್ದಾಳೆ.

ಕುಟುಂಬದವರು ಕವಿತಾಳಿಗೆ ಮತ್ತೊಂದು ಮದುವೆ ಮಾಡಲು ಮುಂದಾಗುತ್ತಿದ್ದ ಹಿನ್ನೆಲೆ, ಆಕೆ ಭಾಸ್ಕರ್ ಜೊತೆ ಮೈಸೂರಿಗೆ ತೆರಳಿ, ಒಂಟಿಕೊಪ್ಪಲು ವೆಂಕಟೇಶ್ವರ ದೇವಸ್ಥಾನದಲ್ಲಿ ಗುಟ್ಟಾಗಿ ವಿವಾಹವಾಗಿದ್ದಾಳೆ ಎಂದು ತಿಳಿದುಬಂದಿದೆ.

ಇತ್ತ, ಕವಿತಾಳ ತಂದೆ ಮಲ್ಲಿಕಾರ್ಜುನ್ ಅವರು ಬೆಂಗಳೂರಿನ ಕುಂಬಳಗೋಡು ಠಾಣೆಯಲ್ಲಿ ಮಗಳ ಅಪಹರಣದ ಬಗ್ಗೆ ದೂರು ದಾಖಲಿಸಿದ್ದಾರೆ. ಮತ್ತೊಂದೆಡೆ, ಕವಿತಾ ಹಾಗೂ ಭಾಸ್ಕರ್ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಆರೋಪಿಸಿದ್ದು, ವಿಶೇಷವಾಗಿ ಸಂಬಂಧಿಕರಿಂದ ಬೆದರಿಕೆ ಬರುತ್ತಿದೆ ಎಂದು ತಿಳಿಸಿದ್ದಾರೆ.

ಜೀವಭಯದಿಂದ ಬೆಂಗಳೂರು ಬಿಟ್ಟು ಮೈಸೂರಿಗೆ ಬಂದಿರುವ ಈ ಜೋಡಿ, ಈಗ ರಕ್ಷಣೆ ಕೋರಿ ಮೈಸೂರು ಎಸ್‌ಪಿ ಕಚೇರಿಗೆ ಭೇಟಿ ನೀಡಿ ಪೊಲೀಸರ ಮೊರೆ ಹೋಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

14 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

18 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago