Categories: CinemaLatest

“40 ವರ್ಷ ಚಿತ್ರರಂಗಕ್ಕೆ ಸೇವೆ… ಈಗ ಅವಕಾಶವೇ ಇಲ್ಲ! ಹಿರಿಯ ನಟಿ ರೇಖಾ ದಾಸ್ ಮನದಾಳದ ನೋವು”

ಸ್ಯಾಂಡಲ್‌ವುಡ್‌ನಲ್ಲಿ ನಾಲ್ಕು ದಶಕಗಳ ಕಾಲ ತಮ್ಮ ಅದ್ಭುತ ಹಾಸ್ಯ ಅಭಿನಯ ಮತ್ತು ಸಹಜ ನಟನೆಯ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ಹಿರಿಯ ನಟಿ ರೇಖಾ ದಾಸ್, ಇದೀಗ ಚಿತ್ರರಂಗದಲ್ಲಿ ಅವಕಾಶಗಳ ಕೊರತೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಸಿನಿಮಾ ಮಾತ್ರವಲ್ಲದೆ ಕಾವ್ಯಾಂಜಲಿ ಸೇರಿದಂತೆ ಹಲವು ಜನಪ್ರಿಯ ಕಿರುತೆರೆ ಧಾರಾವಾಹಿಗಳಲ್ಲೂ ಅಭಿನಯಿಸಿ ಗುರುತಿಸಿಕೊಂಡಿರುವ ಅವರು, ಇತ್ತೀಚೆಗೆ ತಮ್ಮ ವೃತ್ತಿಜೀವನದ ಪ್ರಸ್ತುತ ಸ್ಥಿತಿಯನ್ನು ಬಹಿರಂಗವಾಗಿ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ರೇಖಾ ದಾಸ್, ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, “ನಾವು ಮರೆಯಾಗಿಲ್ಲ, ನಮ್ಮನ್ನು ಮರೆಮಾಡಲಾಗಿದೆ ಎನ್ನುವುದು ಸರಿಯಾದ ಮಾತು. ಅವಕಾಶಗಳು ಯಾಕೆ ಸಿಗುತ್ತಿಲ್ಲ ಎಂಬುದು ನನಗೂ ಅರ್ಥವಾಗುತ್ತಿಲ್ಲ. ನನ್ನಂತೆಯೇ ಅನೇಕ ಹಿರಿಯ ಕಲಾವಿದರು ಕೆಲಸವಿಲ್ಲದೆ ಮನೆದಲ್ಲಿದ್ದಾರೆ. ನಾವು ಭೇಟಿಯಾದಾಗ ಇದೇ ವಿಷಯದ ಬಗ್ಗೆ ಮಾತನಾಡಿಕೊಳ್ಳುತ್ತೇವೆ. ಯಾಕೆ ಯಾರೂ ಕರೆಯುವುದಿಲ್ಲ ಎಂಬ ಪ್ರಶ್ನೆ ನಮ್ಮೆಲ್ಲರಲ್ಲೂ ಇದೆ,” ಎಂದು ಬೇಸರ ವ್ಯಕ್ತಪಡಿಸಿದರು.

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ‘ಜಾಲಿ’ ಸಿನಿಮಾದ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬರುತ್ತಿರುವ ಅವರು, ಹೊಸ ನಿರ್ದೇಶಕರು ಮತ್ತು ನಿರ್ಮಾಪಕರು ಅವಕಾಶ ನೀಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಆದರೆ, ದೊಡ್ಡ ನಿರ್ಮಾಣ ಸಂಸ್ಥೆಗಳು ಮತ್ತು ಸ್ಥಾಪಿತ ನಿರ್ದೇಶಕರು ಹಿರಿಯ ಕಲಾವಿದರನ್ನು ಕಡೆಗಣಿಸುತ್ತಿರುವುದು ನೋವುಂಟು ಮಾಡುತ್ತಿದೆ ಎಂದರು.

“ನಾನು ಚಿತ್ರರಂಗಕ್ಕೆ ಕಾಲಿಟ್ಟು 40 ವರ್ಷಗಳಾಗಿವೆ. ಇಷ್ಟು ವರ್ಷ ಈ ಕ್ಷೇತ್ರವನ್ನೇ ನಂಬಿಕೊಂಡು ಬದುಕಿದ್ದೇವೆ. ಈಗ ಬೇರೆ ಕೆಲಸ ಮಾಡಲು ಸಾಧ್ಯವಿಲ್ಲ. ಚಿಕ್ಕ ವಯಸ್ಸಿನಿಂದಲೇ ಅಭಿನಯವನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದೇವೆ. ಹೊಸ ಪ್ರತಿಭೆಗಳಿಗೆ ಅವಕಾಶ ಸಿಗುವುದು ಒಳ್ಳೆಯದೇ, ಆದರೆ ಅನುಭವಿಗಳನ್ನೂ ಸಂಪೂರ್ಣವಾಗಿ ಮರೆತರೆ ಹೇಗೆ? ನಮಗೆ ಅಭಿನಯ ಬಿಟ್ಟರೆ ಬೇರೆ ವೃತ್ತಿ ಗೊತ್ತಿಲ್ಲ. ಸ್ವಂತ ಉದ್ಯಮ ಆರಂಭಿಸಬೇಕಾದರೂ ಅದಕ್ಕೆ ಬಂಡವಾಳ ಬೇಕು,” ಎಂದು ತಮ್ಮ ಅಸಹಾಯಕತೆಯನ್ನು ಹಂಚಿಕೊಂಡರು.

ಚಿತ್ರರಂಗದಲ್ಲಿ ಅವಕಾಶಗಳು ಕೆಲವೇ ಜನರಿಗೆ ಸೀಮಿತವಾಗುತ್ತಿವೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ರೇಖಾ ದಾಸ್, “ನಿರ್ಮಾಪಕರು ಮತ್ತು ನಿರ್ದೇಶಕರಿಗೆ ಹತ್ತಿರ ಇರುವವರಿಗೆ ಮಾತ್ರ ಹೆಚ್ಚು ಅವಕಾಶಗಳು ಸಿಗುತ್ತಿವೆ. ಉಳಿದ ಕಲಾವಿದರ ಪರಿಸ್ಥಿತಿ ಏನು? ನಾವು ಯಾರನ್ನು ಸಂಪರ್ಕಿಸಬೇಕು?” ಎಂದು ಪ್ರಶ್ನಿಸಿದರು.

ಹಿರಿಯ ಕಲಾವಿದರ ಅನುಭವಕ್ಕೆ ತಕ್ಕ ಗೌರವ ಮತ್ತು ಅವಕಾಶ ದೊರೆಯಬೇಕೆಂಬ ಆಶಯವನ್ನು ವ್ಯಕ್ತಪಡಿಸಿದ ರೇಖಾ ದಾಸ್ ಅವರ ಈ ಮಾತುಗಳು, ಕನ್ನಡ ಚಿತ್ರರಂಗದಲ್ಲಿ ಹಿರಿಯ ಕಲಾವಿದರ ಸ್ಥಿತಿಗತಿಗಳ ಬಗ್ಗೆ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿವೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

13 hours ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

13 hours ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

13 hours ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

2 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

2 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

2 days ago