ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ 38 ಮಂದಿ ಸಾವನ್ನಪ್ಪಿದ್ದು, ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ತಡವಾಗಿ ಮುಂಗಾರು ಕಾಲಿಟ್ಟರು ಕೆಲವೆಡೆ ಉತ್ತಮ ಮಳೆಯಾಗುತ್ತಿದೆ.
ಪ್ರವಾಹ ಉಂಟಾಗಿ ಹಾನಿ ಕೂಡ ಆಗಿದೆ. ಮಳೆಯಿಂದ 38 ಜನರು ಪ್ರಾಣ ಕಳೆದುಕೊಂಡಿದ್ದಾರೆ. 35 ಜನ ಗಾಯಗೊಂಡಿದ್ದಾರೆ. 57 ಮನೆಗಳು ಸಂಪೂರ್ಣ ನಾಶವಾಗಿದ್ದರೆ, 208 ಮನೆಗಳಿಗೆ ತೀವ್ರವಾಗಿ ಹಾನಿಯಾಗಿದೆ. ಜೊತೆಗೆ 2,682 ಮನೆಗಳು ಭಾಗಶಃ ಹಾನಿಗೀಡಾಗಿವೆ ಎಂದು ತಿಳಿಸಿದರು.
ಪ್ರವಾಹ ಸಂಬಂಧಿತ ಘಟನೆಗಳಲ್ಲಿ 105 ಜಾನುವಾರುಗಳು ಕೊಚ್ಚಿ ಹೋಗಿವೆ. 185 ಹೆಕ್ಟೇರ್ ಪ್ರದೇಶದ ಕೃಷಿ ಬೆಳೆ ಹಾನಿಯಾಗಿದೆ. 356 ಹೆಕ್ಟೇರ್ ಪ್ರದೇಶದ ತೋಟಗಾರಿಕಾ ಬೆಳೆ ಹಾಳಾಗಿದೆ. ಒಟ್ಟು 541 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗೆ ನೀರು ನುಗ್ಗಿ ಬೆಳೆ ನಾಶವಾಗಿ ರೈತರು ಭಾರಿ ನಷ್ಟ ಅನುಭವಿಸುವಂತಾಗಿದೆ ಎಂದು ಹೇಳಿದರು.
11,995 ವಿದ್ಯುತ್ ಕಂಬಗಳು ಬಿದ್ದಿವೆ. 894 ವಿದ್ಯುತ್ ಪರಿವರ್ತಕಗಳಿಗೆ ಹಾನಿಯಾಗಿವೆ. ಇನ್ನೂರ ಹದಿನೈದು ಕಿಲೋಮೀಟರ್ನಷ್ಟು ವಿದ್ಯುತ್ ಸರಬರಾಜು ಕಡಿತವಾಗಿದೆ. 189 ಸೇತುವೆಗಳು 859 ಶಾಲಾ ಕೊಠಡಿಗಳು, 8 ಪ್ರಾಥಮಿಕ ಕೇಂದ್ರಗಳು, 269 ಅಂಗನವಾಡಿ ಕೇಂದ್ರಗಳು ಹಾನಿಗೀಡಾಗಿವೆ. ನೆರೆ ಸಂತ್ರಸ್ತರಿಗಾಗಿ 2 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದ್ದೇವೆ ಎಂದು ಮಾಹಿತಿ ನೀಡಿದರು
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…