Latest

ಭಾರೀ ಮಳೆಗೆ ಸಾವನ್ನಪ್ಪಿದ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ – ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ 38 ಮಂದಿ ಸಾವನ್ನಪ್ಪಿದ್ದು, ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ತಡವಾಗಿ ಮುಂಗಾರು ಕಾಲಿಟ್ಟರು ಕೆಲವೆಡೆ ಉತ್ತಮ ಮಳೆಯಾಗುತ್ತಿದೆ.
ಪ್ರವಾಹ ಉಂಟಾಗಿ ಹಾನಿ ಕೂಡ ಆಗಿದೆ. ಮಳೆಯಿಂದ 38 ಜನರು ಪ್ರಾಣ ಕಳೆದುಕೊಂಡಿದ್ದಾರೆ. 35 ಜನ ಗಾಯಗೊಂಡಿದ್ದಾರೆ. 57 ಮನೆಗಳು ಸಂಪೂರ್ಣ ನಾಶವಾಗಿದ್ದರೆ, 208 ಮನೆಗಳಿಗೆ ತೀವ್ರವಾಗಿ ಹಾನಿಯಾಗಿದೆ. ಜೊತೆಗೆ 2,682 ಮನೆಗಳು ಭಾಗಶಃ ಹಾನಿಗೀಡಾಗಿವೆ ಎಂದು ತಿಳಿಸಿದರು.
ಪ್ರವಾಹ ಸಂಬಂಧಿತ ಘಟನೆಗಳಲ್ಲಿ 105 ಜಾನುವಾರುಗಳು ಕೊಚ್ಚಿ ಹೋಗಿವೆ. 185 ಹೆಕ್ಟೇರ್ ಪ್ರದೇಶದ ಕೃಷಿ ಬೆಳೆ ಹಾನಿಯಾಗಿದೆ. 356 ಹೆಕ್ಟೇರ್ ಪ್ರದೇಶದ ತೋಟಗಾರಿಕಾ ಬೆಳೆ ಹಾಳಾಗಿದೆ. ಒಟ್ಟು 541 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗೆ ನೀರು ನುಗ್ಗಿ ಬೆಳೆ ನಾಶವಾಗಿ ರೈತರು ಭಾರಿ ನಷ್ಟ ಅನುಭವಿಸುವಂತಾಗಿದೆ ಎಂದು ಹೇಳಿದರು.
11,995 ವಿದ್ಯುತ್​ ಕಂಬಗಳು ಬಿದ್ದಿವೆ. 894 ವಿದ್ಯುತ್​ ಪರಿವರ್ತಕಗಳಿಗೆ ಹಾನಿಯಾಗಿವೆ. ಇನ್ನೂರ ಹದಿನೈದು ಕಿಲೋಮೀಟರ್​ನಷ್ಟು ವಿದ್ಯುತ್ ಸರಬರಾಜು ಕಡಿತವಾಗಿದೆ. 189 ಸೇತುವೆಗಳು 859 ಶಾಲಾ ಕೊಠಡಿಗಳು, 8 ಪ್ರಾಥಮಿಕ ಕೇಂದ್ರಗಳು, 269 ಅಂಗನವಾಡಿ ಕೇಂದ್ರಗಳು ಹಾನಿಗೀಡಾಗಿವೆ. ನೆರೆ ಸಂತ್ರಸ್ತರಿಗಾಗಿ 2 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದ್ದೇವೆ ಎಂದು ಮಾಹಿತಿ ನೀಡಿದರು

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

1 day ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

1 day ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago