Latest

5 ಲಕ್ಷ ರೂ. ಲಂಚ ಪಡೆದ ವಿಶೇಷ ತಹಶೀಲ್ದಾರ್‌ ವರ್ಷಾ ಒಡೆಯರ್‌ ಅರೆಸ್ಟ್‌

ಬೆಂಗಳೂರು ಉತ್ತರ ತಾಲೂಕಿನ ವಿಶೇಷ ತಹಶೀಲ್ದಾರ್‌ ವರ್ಷಾ ಒಡೆಯರ್‌ ಹಾಗೂ ಮಧ್ಯವರ್ತಿ ರಮೇಶ್‌ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನಿನ ಖಾತೆ ಬದಲಾವಣೆಗೆ 5 ಲಕ್ಷ ಲಂಚ ಪಡೆಯುತ್ತಿದ್ದಾಗ ವರ್ಷಾರನ್ನು ಬಂಧಿಸಲಾಗಿದೆ. ದಾಸನಪುರ ಹೋಬಳಿ ವ್ಯಾಪ್ತಿಯ ಕೆಂಗನಹಳ್ಳಿ ಗ್ರಾಮದಲ್ಲಿ ಲಲಿತ್​ಕುಮಾರ್‌ ಎಂಬವರಿಂದ ವ್ಯಕ್ತಿಯೊಬ್ಬರು 2 ಎಕರೆ ಜಮೀನು ಖರೀದಿಸಿದ್ದರು.
ಲಲಿತ್‌ ಅವರ ಹೆಸರೇ ಪಹಣಿಯಲ್ಲಿ ನಮೂದಾಗಿರಲಿಲ್ಲ. ಅವರ ಪರವಾಗಿ ಕಾಂತರಾಜು ಉಪ ವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪಹಣಿಯಲ್ಲಿ ಲಲಿತ್‌ ಹೆಸರು ನಮೂದಿಸುವಂತೆ ಉಪ ವಿಭಾಗಾಧಿಕಾರಿ ನ್ಯಾಯಾಲಯ ಅ.22ರಂದು ಆದೇಶ ಹೊರಡಿಸಿತ್ತು.
ಉಪ ವಿಭಾಗಾಧಿಕಾರಿ ಆದೇಶದಂತೆ ಪಹಣಿ ತಿದ್ದುಪಡಿಗೆ ಕಾಂತರಾಜು ಅರ್ಜಿ ಸಲ್ಲಿಸಿದ್ದರು. ಪ್ರತಿ ಎಕರೆಗೆ 5 ಲಕ್ಷದಂತೆ 10 ಲಕ್ಷ ಲಂಚ ನೀಡುವಂತೆ ವಿಶೇಷ ತಹಶೀಲ್ದಾರ್‌ ಮಧ್ಯವರ್ತಿ ರಮೇಶ್‌ ಮೂಲಕ ಅರ್ಜಿದಾರರಿಗೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಸೇಂಟ್‌ ಮಾರ್ಥಾಸ್‌ ಆಸ್ಪತ್ರೆ ವಾಹನ ನಿಲುಗಡೆ ತಾಣದ ಬಳಿ ಬಂದು ಹಣ ತಲುಪಿಸುವಂತೆ ಮಧ್ಯವರ್ತಿ ಕಾಂತರಾಜುಗೆ ಸೂಚಿಸಿದ್ದರು. ಕಾಂತರಾಜು 5 ಲಕ್ಷ ನೀಡಿದರು. ತಕ್ಷಣ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು, ರಮೇಶ್‌ ಅವರನ್ನು ಬಂಧಿಸಿದರು.
ನನ್ನದೇನೂ ತಪ್ಪಿಲ್ಲ. ತಹಶೀಲ್ದಾರ್‌ ವರ್ಷಾ ಅವರ ಸೂಚನೆಯಂತೆ ಹಣ ಪಡೆದಿದ್ದೇನೆ ಎಂದು ರಮೇಶ್‌ ತಿಳಿಸಿದ್ದು, ವಿಶೇಷ ತಹಶೀಲ್ದಾರ್‌ ಕಚೇರಿಗೆ ಬಂದ ರಮೇಶ್‌, ಮೇಡಂ ವ್ಯವಹಾರ ಮುಗಿದಿದೆ ಎಂದು ಹೇಳಿದಾಗ ಹಣ ಕೊಡು ಎಂದು ವರ್ಷಾ 5 ಲಕ್ಷ ಪಡೆದುಕೊಂಡರು ಎಂದು ಹೇಳಲಾಗಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago