ಬೆಂಗಳೂರು ನಗರದಲ್ಲಿ ದನದ ಕರುಗಳ ಮಾಂಸವನ್ನು ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಭಾರೀ ಪ್ರಮಾಣದ ಮಾಂಸ ಸಾಗಾಟ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ರಾಷ್ಟ್ರ ರಕ್ಷಣಾ ಪಡೆಯ ನಾಯಕ ಪುನೀತ್ ಕೆರೆಹಳ್ಳಿ ಮತ್ತು ಅವರ ಬೆಂಬಲಿಗರು ಪ್ರಮುಖ ಪಾತ್ರವಹಿಸಿದ್ದಾರೆ.
ಶನಿವಾರ ಬೆಳಗಿನ ಜಾವ, ದಾಸರಹಳ್ಳಿ ಸಮೀಪ ಕುದೂರಿನಿಂದ ಶಿವಾಜಿನಗರದ ಮಾಂಸದ ಮಾರುಕಟ್ಟೆಯತ್ತ ಸಾಗುತ್ತಿದ್ದ ಬುಲೆರೋ ವಾಹನವೊಂದನ್ನು ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ತಡೆದು ನಿಲ್ಲಿಸಿತು. ವಾಹನ ಪರಿಶೀಲನೆಯ ವೇಳೆ ಸುಮಾರು 500 ಕೆ.ಜಿ.ಗಿಂತ ಹೆಚ್ಚು ದನದ ಮಾಂಸ ಪತ್ತೆಯಾಗಿದೆ. ಸ್ಥಳಕ್ಕೆ ತಕ್ಷಣವೇ ಪೀಣ್ಯ ಪೊಲೀಸರು ಭೇಟಿ ನೀಡಿ ವಾಹನ ಮತ್ತು ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ, ಈ ಅಕ್ರಮ ಮಾಂಸ ಸಾಗಾಟವು ಪ್ರತಿ ವಾರ ಮೂರು ಬಾರಿ ನಡೆಯುತ್ತಿದ್ದುದಾಗಿ ವಾಹನದ ಚಾಲಕ ಒಪ್ಪಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಂಸದ ಮಾದರಿಗಳನ್ನು ಲ್ಯಾಬ್‌ಗೆ ಕಳುಹಿಸಲಾಗಿದ್ದು, ಇದು ಧನದ ಕರುಗಳ ಮಾಂಸವೋ ಎಂಬುದು ಪರೀಕ್ಷೆ ಬಳಿಕ ಗೊತ್ತಾಗಲಿದೆ.
ಈ ಘಟನೆಯ ನಂತರ ಕರ್ನಾಟಕ ಗೋವು ವಧೆ ನಿಷೇಧ ಕಾಯ್ದೆ, 2020ರ ಅಡಿಯಲ್ಲಿ ಪೊಲೀಸ್ ತನಿಖೆ ಆರಂಭವಾಗಿದ್ದು, ವಾಹನ ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸುವ ತಯಾರಿ ನಡೆದಿದೆ.
ಇದರಿಂದ ಶಿವಾಜಿನಗರ ಮಾರುಕಟ್ಟೆಯಲ್ಲಿ ಮಾಂಸದ ವಹಿವಾಟು ತಾತ್ಕಾಲಿಕವಾಗಿ ಅಸ್ತವ್ಯಸ್ತಗೊಂಡಿದ್ದು, ವ್ಯಾಪಾರಿಗಳ ನಡುವೆ ಆತಂಕವೂ ಮನೆಮಾಡಿದೆ. ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಈ ಪ್ರಕರಣವು ನಗರದಲ್ಲಿ ಅಕ್ರಮ ಮಾಂಸ ಸಾಗಾಟದ ಜಾಲವೊಂದಿದೆ ಎಂಬ ಶಂಕೆಗೂ ಹಬ್ಬಿಸಿದೆ.
ಪೊಲೀಸರು ಮುಂದಿನ ದಿನಗಳಲ್ಲಿ ಹೆಚ್ಚಿನ ಆರೋಪಿಗಳನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…