ದೇವಾಲಯದ ಹುಂಡಿಯ ಖಾತೆಯಲ್ಲಿದ್ದ 60 ಲಕ್ಷ ರೂ. ಹಣವನ್ನು ವೈಯಕ್ತಿಕ ಖಾತೆಗೆ ವರ್ಗಾಯಿಸಿಕೊಂಡ ಪ್ರಕರಣ ಬೆಳಕಿಗೆ ಬಿದ್ದಿದ್ದು, ಸಂಬಂಧಪಟ್ಟ ಅಧಿಕಾರಿಯನ್ನು ಸರ್ಕಾರ ಅಮಾನತು ಮಾಡಿದೆ.
ಸಾಸಲು ಹೋಬಳಿಯ ರೆವೆನ್ಯೂ ಇನ್ಸ್‌ಪೆಕ್ಟರ್ ಹೇಮಂತ್ ಕುಮಾರ್ ಎಂಬವರು ಈ ವಂಚನೆಗೆ ತೊಡಗಿರುವುದು ತನಿಖೆಯ ವೇಳೆ ಬಹಿರಂಗವಾಗಿದೆ. ಮುಜರಾಯಿ ಇಲಾಖೆಯಲ್ಲಿ ಕೇಸ್ ವರ್ಕರ್ ಆಗಿ ಸೇವೆ ಸಲ್ಲಿಸುತ್ತಿದ್ದಾಗಲೇ, ದೇವಸ್ಥಾನದ ಹುಂಡಿಯ ಹಣವನ್ನು ತನ್ನ ಪತ್ನಿಯ ಖಾತೆಗೆ ವರ್ಗಾಯಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಹೆಚ್ಚುವರಿ ತನಿಖೆಯಲ್ಲಿ ಶಾಕಿಂಗ್ ಮಾಹಿತಿ
2023 ರಿಂದ ಇತ್ತೀಚೆಗೆ ಅಧಿಕಾರಿಯು ಇಬ್ಬರು ತಹಶೀಲ್ದಾರ್ ಮತ್ತು ಓರ್ವ ಕೇಸ್ ವರ್ಕರ್ ಸಹಿಯನ್ನೂ ನಕಲಿ ಮಾಡಿದ್ದು, ನಕಲಿ ಸೀಲ್ ಬಳಸಿ, ಕೋಟ್ಯಂತರ ಹಣವನ್ನು ಹಲವು ಖಾತೆಗಳಿಗೆ ವರ್ಗಾಯಿಸಿದ್ದಾನೆ ಎಂಬುದು ಪತ್ತೆಯಾಗಿಸಿದೆ. ರೆವೆನ್ಯೂ ಇನ್ಸ್‌ಪೆಕ್ಟರ್ ಆಗಿ ವರ್ಗಾವಣೆಯಾದರೂ ಮುಜರಾಯಿ ಇಲಾಖೆಯ ಚೆಕ್‌ಬುಕ್ ವಾಪಸ್ ನೀಡದೆ, ಅದನ್ನು ದುರುಪಯೋಗಪಡಿಸಿಕೊಂಡು ಹಣ ಡ್ರಾ ಮಾಡಿರುವ ಆರೋಪವೂ ಕೇಳಿ ಬಂದಿದೆ.
ಪೊಲೀಸ್ ದೂರು, ಬಂಧನ
ಈ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ದಾಖಲಾಗಿತ್ತು. ತನಿಖೆ ನಡೆಸಿದಾಗ ತಹಶೀಲ್ದಾರ್ ಇಲಾಖೆಯ ಖಾತೆಯಲ್ಲಿ ಹಣದ ಲೆಕ್ಕ ತಾಳೆಯಾಗದಿದ್ದು, ವಂಚನೆ ದೃಢಪಟ್ಟಿದೆ. ಇದರಿಂದಾಗಿ ಪೊಲೀಸರು ಹೇಮಂತ್ ಕುಮಾರ್ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಅಕ್ರಮ ಹಣದಿಂದಲೇ ಮನೆ ನಿರ್ಮಾಣ
ತನ್ನ ವಂಚಿತ ಹಣವನ್ನು ಬಳಸಿಕೊಂಡು ಬೃಹತ್ ಮನೆ ನಿರ್ಮಿಸಿರುವುದಾಗಿ ತನಿಖೆಯ ವೇಳೆ ಹೇಮಂತ್ ಕುಮಾರ್ ಸ್ವೀಕರಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸರ್ಕಾರ ಈ ಪ್ರಕರಣದ ಬಗ್ಗೆ ಗಂಭೀರವಾಗಿ ಗಮನಹರಿಸಿದ್ದು, ಕಂದಾಯ ಇಲಾಖೆ ಈತನನ್ನು ಸೇವೆಯಿಂದ ಅಮಾನತುಗೊಳಿಸಿದೆ.
ಇಂತಹ ಪ್ರಕರಣಗಳು ಸರ್ಕಾರದ ಸತತ ನಿಗಾ ಮತ್ತು ಕಟ್ಟುನಿಟ್ಟಿನ ಕ್ರಮ ಅಗತ್ಯವೆಂಬುದನ್ನು ತೋರಿಸುತ್ತವೆ. ತನಿಖೆ ಮುಂದುವರೆದಿದ್ದು, ಇನ್ನಷ್ಟು ಮಾಹಿತಿಗಳು ಹೊರಬೀಳುವ ಸಾಧ್ಯತೆ ಇದೆ.
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…