Categories: CrimeLatest

ತನ್ನ ಪರ ತೀರ್ಪಿಗಾಗಿ ನ್ಯಾಯಾಧೀಶರ ಕುರ್ಚಿಗೆ ‘ಮಾಟ-ಮಂತ್ರ’ ಆರೋಪ: 65 ವರ್ಷದ ಮಹಿಳೆ ಬಂಧನ

ಚಿಕ್ಕಬಳ್ಳಾಪುರ: ನ್ಯಾಯಾಲಯದಲ್ಲಿ ತನ್ನ ಪರವಾಗಿ ಅನುಕೂಲಕರ ತೀರ್ಪು ಬರಬೇಕೆಂಬ ಉದ್ದೇಶದಿಂದ ಮಹಿಳಾ ನ್ಯಾಯಾಧೀಶರ ಕುರ್ಚಿಗೆ ಮಾಟ-ಮಂತ್ರ ಮಾಡಿರುವ ಆರೋಪದ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುಳಾ (65) ಎಂಬ ಮಹಿಳೆಯನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರದ ವಲಸಣ್ಣ ಬೀದಿ ನಿವಾಸಿಯಾಗಿರುವ ಮಂಜುಳಾ, 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರ ಡಯಾಸ್‌ನಲ್ಲಿರುವ ಕುರ್ಚಿಯ ಮೇಲೆ ಮಂತ್ರಿಸಲಾಗಿದೆ ಎನ್ನಲಾದ ಬಿಳಿ ಸಾಸಿವೆಯನ್ನು ಚೆಲ್ಲಿದ್ದರು ಎಂದು ಆರೋಪಿಸಲಾಗಿದೆ.

ಎರಡು ದಿನಗಳ ಹಿಂದೆ ನಡೆದಿದ್ದ ಈ ಕೃತ್ಯ ನ್ಯಾಯಾಲಯದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳ ಆಧಾರದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಘಟನೆ ಸಂಬಂಧ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ನೇತ್ರಾ ನೀಡಿದ ದೂರಿನ ಮೇರೆಗೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಜುಳಾ ವಿರುದ್ಧ ಕರ್ನಾಟಕ ಅಮಾನವೀಯ ದುಷ್ಟಪದ್ಧತಿಗಳು ಹಾಗೂ ವಾಮಾಚಾರ ಪ್ರತಿಬಂಧಕ ಮತ್ತು ನಿರ್ಮೂಲನಾ ಅಧಿನಿಯಮ–2017ರಡಿ ಪ್ರಕರಣ ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮಂಜುಳಾಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆಕೆಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಭ್ರಷ್ಟರ ಬೇಟೆ

Recent Posts

ನಕಲಿ ದಾಖಲೆ ಸೃಷ್ಟಿಸಿ ಜಮೀನು ಪರಭಾರೆ ಆರೋಪ: ಐವರು ಬಂಧನ

ಅಂಕೋಲಾ: ನಕಲಿ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಸಹಿ ಸೇರಿದಂತೆ ವಿವಿಧ ದಾಖಲೆಗಳನ್ನು ಸೃಷ್ಟಿಸಿ ಜಮೀನನ್ನು ಅಕ್ರಮವಾಗಿ ಪರಭಾರೆ ಮಾಡಿದ…

11 hours ago

₹3 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸರ್ಕಾರಿ ನೌಕರ

ಬಾಗಲಕೋಟೆ: ಸ್ವಾವಲಂಬಿ ಸಾರಥಿ ಯೋಜನೆಯಡಿ ಮಂಜೂರಾದ ₹3 ಲಕ್ಷ ಸಹಾಯಧನದ ಮಂಜೂರಾತಿ ಆದೇಶ ನೀಡಲು ಹಾಗೂ ವಾಹನದ ಜಿಪಿಎಸ್ ಫೋಟೊ…

11 hours ago

ವಾಟದಹೊಸಹಳ್ಳಿ ಕೆರೆಯಲ್ಲಿ ಯುವಕನ ಶವ ಪತ್ತೆ: ಮುಂಜಾನೆ ನಾಪತ್ತೆಯಾಗಿದ್ದ 25 ವರ್ಷದ ಮನೋಜ್ ಮೃತ್ಯು

ಗೌರಿಬಿದನೂರು: ಮುಂಜಾನೆ ಕೆಲಸಕ್ಕೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 25 ವರ್ಷದ ಯುವಕನೊಬ್ಬ ನಾಪತ್ತೆಯಾಗಿದ್ದು, ಮರುದಿನ ಸಂಜೆ ಆತನ ಮೃತದೇಹ ಕೆರೆಯಲ್ಲಿ…

11 hours ago

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

3 days ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

3 days ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

3 days ago