ರಾಯಚೂರು, ಫೆಬ್ರವರಿ 10: ಜಿಲ್ಲೆಯ ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. 43 ವರ್ಷದ ಚಂದ್ರಶೇಖರ್ ಎಂಬಾತ ಮಾನಸಿಕ ಅಸ್ವಸ್ಥಳಾದ ಆರನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾನೆ.
ಘಟನೆ ಶುಕ್ರವಾರ ಮಧ್ಯಾಹ್ನ ಶಾಲೆ ಮಧ್ಯಾಹ್ನದ ಊಟದ ವೇಳೆ ನಡೆದಿದೆ. ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಬಾಲಕಿಗೆ ಚಾಕೊಲೇಟ್ ನೀಡುವ ನೆಪದಲ್ಲಿ ಆರೋಪಿಯು ಆಕೆಯನ್ನು ಕರೆದೊಯ್ದಿದ್ದಾನೆ. ಬಳಿಕ ತನ್ನ ಮನೆಯಲ್ಲಿ ಬಾಲಕಿಯನ್ನು ಕಿರುಕುಳ ನೀಡಿದ್ದಾನೆ.
ಸ್ಥಳೀಯರು ಈ ಬಗ್ಗೆ ಅನುಮಾನಗೊಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಟ್ಟಿ ಪೊಲೀಸ್ ಇನ್ಸ್‌ಪೆಕ್ಟರ್ ಹೊಸಕೇರಪ್ಪ ನೇತೃತ್ವದ ತಂಡ ಚಂದ್ರಶೇಖರ್ ನಿವಾಸಕ್ಕೆ ಧಾವಿಸಿದ್ದು, ಪ್ರಾರಂಭದಲ್ಲಿ ಆರೋಪಿ ಬಾಗಿಲು ತೆಗೆಯಲು ನಿರಾಕರಿಸಿದ್ದ. ಆದರೆ ಪೊಲೀಸರು ಬಲವಂತವಾಗಿ ಒಳನುಗ್ಗಿ ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಈ ಸಂಬಂಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿ ಪೊಲೀಸರು ಮುಂದಿನ ಹಂತದ ತನಿಖೆ ಕೈಗೊಂಡಿದ್ದಾರೆ. ಇಂತಹ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹ ವ್ಯಕ್ತಪಡಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…