Latest

ಚಂದಾಪುರ ಸೂಟ್‌ಕೇಸ್‌ ಹತ್ಯೆ ಪ್ರಕರಣದಲ್ಲಿ 7 ಆರೋಪಿಗಳ ಬಂಧನ: ಬಿಹಾರದಲ್ಲಿ ಪೊಲೀಸರ ತುರ್ತು ಕಾರ್ಯಾಚರಣೆ

ಬೆಂಗಳೂರು, ಜೂನ್ 7: ಬೆಂಗಳೂರು ಹೊರವಲಯದ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಮೇ 21 ರಂದು ಪತ್ತೆಯಾಗಿದ್ದ ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಬಿಹಾರದಲ್ಲಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಎಸೆದ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ರಾಜ್ಯದಲ್ಲಿ ಆತಂಕ ಮೂಡಿಸಿತ್ತು.

ಬಂಧಿತರೆಲ್ಲರೂ ಬಿಹಾರದ ನವಾಡ ಜಿಲ್ಲೆಗೆ ಸೇರಿದವರಾಗಿದ್ದು, ಅವರಲ್ಲಿ ಮೂವರನ್ನು ಪೊಲೀಸರು ಗುರುತಿಸಿದ್ದು — ಆಶಿಕ್ ಕುಮಾರ್, ಮುಖೇಶ್ ಹಾಗೂ ರಾಜಾರಾಮ್ ಮೋಹನ್ ಎಂಬವರಾಗಿದ್ದಾರೆ. ಇವರು ಆರೋಪದ ಮೇಲೆ ಬಿಹಾರಕ್ಕೆ ಪರಾರಿಯಾಗಿದ್ದರೆಂದು ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ ಪೊಲೀಸ್ ವಿಭಾಗದ ಸೂರ್ಯನಗರ ಠಾಣೆಯ ತಂಡವೊಂದು ಬಿಹಾರಕ್ಕೆ ತೆರಳಿ ಈ ಆರೋಪಿಗಳನ್ನು ಬಂಧಿಸಿದೆ. ಅವರಿಗೆ ಈಗ ಬೆಂಗಳೂರು ತರಲಾಗುತ್ತಿದೆ.

ಹತ್ಯೆಗೀಡಾದವರು ಯಾರು?

ಮೇ 21ರಂದು ಚಂದಾಪುರ ರೈಲ್ವೆ ಸೇತುವೆ ಬಳಿ ಬಿಸಾಡಲಾಗಿದ್ದ ಲಾಲ ಬಣ್ಣದ ಸೂಟ್‌ಕೇಸ್‌ನೊಳಗೆ 17 ವರ್ಷದ ರೀಮಾ ಎಂಬ ಯುವತಿಯ ಶವ ಪತ್ತೆಯಾಗಿತ್ತು. ಶವದ ಸ್ಥಿತಿ ಭೀಕರವಾಗಿದ್ದು, ಬಾಲಕಿಯನ್ನು ಬೇರೆಡೆ ಕೊಂದು ನಂತರ ಶವವನ್ನು ಇಲ್ಲಿ ಬಿಸಾಡಲಾಗಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ಬಹಿರಂಗವಾಗಿದೆ.

ಕೊಲೆಗೆ ಕಾರಣ ಇನ್ನೂ ಸ್ಪಷ್ಟವಿಲ್ಲ

ಪೊಲೀಸರ ಪ್ರಕಾರ, ಕೊಲೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಶಂಕಿತ ಆರೋಪಿಗಳ ವಿರುದ್ಧದ ಮಾಹಿತಿ ಮತ್ತು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಸ್ಪಷ್ಟತೆ ಬರುವ ನಿರೀಕ್ಷೆಯಿದೆ.

ಮುಂದಿನ ಹಂತ

ಬಂಧಿತ ಆರೋಪಿಗಳನ್ನು ಬೆಂಗಳೂರಿಗೆ ತರಲಾಗುತ್ತಿದ್ದು, ವಿಚಾರಣೆಗೆ ಒಳಪಡಿಸಲಾಗುವುದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಬಂಧನಗಳ ಸಾಧ್ಯತೆ ಉಂಟೆಂದು ಪೊಲೀಸರು ತಿಳಿಸಿದ್ದಾರೆ.

ರೀಮಾಳ ಕುಟುಂಬ ಮತ್ತು ಸ್ಥಳೀಯರು ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ, ಪೊಲೀಸರು ಪ್ರಕರಣದ ಹಿಂದೆ ಇನ್ನೇನು ನಿರ್ಧಿಷ್ಟ ಷಡ್ಯಂತ್ರವಿದೆಯಾ ಎಂಬ ಕೋನದಲ್ಲಿಯೂ ತನಿಖೆ ಮುಂದುವರೆಸಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

11 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

23 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

1 day ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago