ಕಾನೂನು ಪದವಿ ಪಡೆದ ನಂತರ ಉತ್ತಮ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ. ಕರ್ನಾಟಕ ಹೈಕೋರ್ಟ್‌ವು 2026ರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಒಟ್ಟು 70 ಅಸಿಸ್ಟಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 15 ಎಂದು ನಿಗದಿಪಡಿಸಲಾಗಿದೆ.
ನೇಮಕಾತಿ ವಿವರಗಳು:
ಸಂಸ್ಥೆ: ಕರ್ನಾಟಕ ಹೈಕೋರ್ಟ್
ಹುದ್ದೆ ಹೆಸರು: ಅಸಿಸ್ಟಂಟ್ ಕೋರ್ಟ್ ಸೆಕ್ರೆಟರಿ
ಹುದ್ದೆಗಳ ಸಂಖ್ಯೆ: 70
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ವಿಧಾನ: ಆನ್‌ಲೈನ್
ಕೊನೆಯ ದಿನಾಂಕ: ಏಪ್ರಿಲ್ 15
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ (Law Degree) ಹಾಗೂ ಎಂಬಿಎ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 40 ವರ್ಷಗಳಾಗಿದ್ದು, ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: ₹250
ಇತರ ಅಭ್ಯರ್ಥಿಗಳಿಗೆ: ₹500
ವಯೋಮಿತಿ ಸಡಿಲಿಕೆ:
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ: 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಸ್ಟೆನೋಗ್ರಫಿ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸಂಬಳ:
ಆಯ್ಕೆಯಾದವರಿಗೆ ತಿಂಗಳಿಗೆ ₹44,900 ರಿಂದ ₹1,42,000 ವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
karnatakajudiciary.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಿ
ಸಂಬಂಧಿತ ನೇಮಕಾತಿ ಅಧಿಸೂಚನೆಯನ್ನು ಓದಿ
ಆನ್‌ಲೈನ್ ಅರ್ಜಿ ಲಿಂಕ್ ತೆರೆಯಿರಿ
ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ
ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಸಲ್ಲಿಸಿ
ಭವಿಷ್ಯದ ಉಪಯೋಗಕ್ಕಾಗಿ ಅರ್ಜಿ ಪ್ರಿಂಟೌಟ್ ತೆಗೆದುಕೊಳ್ಳಿ
ಈ ನೇಮಕಾತಿ ಕಾನೂನು ಹಾಗೂ ಆಡಳಿತ ಕ್ಷೇತ್ರದಲ್ಲಿ ಕೆಲಸ ಮಾಡಲು ಬಯಸುವವರಿಗೆ ಉತ್ತಮ ಅವಕಾಶವಾಗಿದ್ದು, ಆಸಕ್ತರು ಸಮಯಕ್ಕೆ ಅರ್ಜಿ ಸಲ್ಲಿಸುವುದು ಅಗತ್ಯ.
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…