Categories: CorruptionLatest

₹72 ಕೋಟಿ ಕೆಆರ್‌ಐಡಿಎಲ್ ಭ್ರಷ್ಟಾಚಾರ ಪ್ರಕರಣ: ಮಾಜಿ ಕಾರ್ಯನಿರ್ವಾಹಕ ಎಂಜಿನಿಯರ್ ಝರಣಪ್ಪ ಚಿಂಚೋಳಿಕರ್ ಲೋಕಾಯುಕ್ತ ಬಲೆಗೆ

ಕೆಆರ್‌ಐಡಿಎಲ್ (ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ) ನಲ್ಲಿ ನಡೆದಿರುವ ಬಹುಕೋಟಿ ರೂಪಾಯಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮಾಜಿ ಕಾರ್ಯನಿರ್ವಾಹಕ ಎಂಜಿನಿಯರ್ ಝರಣಪ್ಪ ಎಂ. ಚಿಂಚೋಳಿಕರ್ ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇಲಾಖೆಯ ಗ್ರೂಪ್ ಲೀಡರ್ ದೇವರಾಜ ರೇಷ್ಮೆ ಅವರನ್ನೂ ವಶಕ್ಕೆ ಪಡೆದು, ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಕರಣದ ತನಿಖೆಯನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದ್ದು, ಲೋಕಾಯುಕ್ತ ಡಿವೈಎಸ್‌ಪಿ ಮಲ್ಲಿಕಾರ್ಜುನ ಚುಕ್ಕಿ ನೇತೃತ್ವದ ತಂಡ ಬೆಂಗಳೂರು ಹಾಗೂ ಕಲಬುರಗಿ ಜಿಲ್ಲೆಯ ಅಧಿಕಾರಿಗಳ ಸಹಕಾರದೊಂದಿಗೆ ಬಂಧನ ಕಾರ್ಯಾಚರಣೆ ನಡೆಸಿತು. ಬಂಧನದ ಬಳಿಕ ಇಬ್ಬರಿಗೂ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಯಿತು.

ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ಝರಣಪ್ಪ ಚಿಂಚೋಳಿಕರ್, ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ 2016ರಿಂದ 2018ರ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಅಕ್ರಮ ಎಸಗಿರುವ ಆರೋಪ ಎದುರಿಸುತ್ತಿದ್ದರು. ತನಿಖೆಯಲ್ಲಿ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ ಎರಡು ವರ್ಷಗಳ ಹಿಂದೆ ಅವರನ್ನು ಅಮಾನತುಗೊಳಿಸಲಾಗಿತ್ತು. ನಂತರ ಸೇವೆಯಿಂದಲೂ ವಜಾಗೊಳಿಸಲಾಗಿತ್ತು.

ಮಾಜಿ ಸಚಿವ ಹಾಲಪ್ಪ ಆಚಾರ್ ಅವರು 2020ರಲ್ಲಿ ನೀಡಿದ್ದ ದೂರಿನ ಮೇರೆಗೆ, ಸುವರ್ಣ ಗ್ರಾಮ ಯೋಜನೆಯ ಕಾಮಗಾರಿಗಳನ್ನು ಸಮರ್ಪಕವಾಗಿ ನಿರ್ವಹಿಸದೇ ಸರ್ಕಾರಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ತನಿಖೆ ಆರಂಭವಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಂಜಿನಿಯರ್‌ಗಳ ಸಮಿತಿಯಿಂದ ಸ್ಥಳ ಪರಿಶೀಲನೆ ಮತ್ತು ಪಂಚನಾಮೆ ನಡೆಸಲಾಗಿತ್ತು.

ಇದಕ್ಕೂ ಮುನ್ನ ಝರಣಪ್ಪ ಅವರ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೀಗ ಆ ಪ್ರಕರಣ ಸೇರಿದಂತೆ ಕೆಆರ್‌ಐಡಿಎಲ್‌ನಲ್ಲಿ ನಡೆದಿರುವ ಅಂದಾಜು ₹72 ಕೋಟಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಿ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

2 days ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

2 days ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

2 days ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

3 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

3 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

3 days ago