ನಗರ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದಲ್ಲಿ ಕೇರಳದ ಕಣ್ಣೂರಿನ ಪತಾಯಕುನ್ನು ಉಮ್ಮರ್ ವಲಿಯ ಪರಂಬತ್ (41) ಮತ್ತು ರಿಯಾಝ್ ಎಂ.ವಿ. (45) ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ, ಹಂತ ಹಂತವಾಗಿ 77,96,322.08 ರೂ. ವಂಚನೆ ಮಾಡಲಾಗಿದೆ. ಹಣ ತೊಡಗಿಸಿದ ವ್ಯಕ್ತಿಗೆ ಲಾಭಾಂಶ ನೀಡದೆ ಮೋಸಮಾಡಿದ ಆರೋಪಿಗಳು, ಈ ಬಗ್ಗೆ ಸಂತ್ರಸ್ತರಿಂದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು, ವಂಚನೆಗೆ ಸಂಬಂಧಿಸಿದ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿದರು. ಪರಿಶೀಲನೆಯ ವೇಳೆ ಪಶ್ಚಿಮ ಬಂಗಾಳ ಮೂಲದ ಖಾತೆಗೆ 26,27,114.4 ರೂ. ವರ್ಗಾವಣೆಯಾದುದು ಮತ್ತು ಅದರಿಂದ ಉಮ್ಮರ್ ವಲಿಯ ಪರಂಬತ್ ಖಾತೆಗೆ 6 ಲಕ್ಷ ರೂ. ಪಾವತಿಯಾದುದು ಪತ್ತೆಯಾಯಿತು.
ಪೊಲೀಸರು ತನಿಖೆ ಮುಂದುವರಿಸಿಕೊಂಡು, ರಿಯಾಝ್ ಎಂ.ವಿ. ಹಣವನ್ನು ವರ್ಗಾವಣೆ ಮಾಡಿರುವುದಾಗಿ ದೃಢಪಡಿಸಿದರು. ತಕ್ಷಣವೇ ಪ್ರಕರಣದಲ್ಲಿ ಭಾಗಿಯಾದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಎಸಿಪಿ ರವೀಶ್ ನಾಯಕ, ಸೆನ್ ಠಾಣಾ ನಿರೀಕ್ಷಕ ಸತೀಶ್ ಎಂ.ಪಿ., ಮತ್ತು ಎಸ್ಸೆ ಗುರಪ್ಪಕಾಂತಿ ನೇತೃತ್ವದ ತಂಡ ಭಾಗವಹಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…