ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ಸಂಭವಿಸಿದ ಒಂದು ಮರ್ಮವಿದ್ರಾವಕ ಘಟನೆ, ಮನುಷ್ಯತ್ವದ ಅರಿವು ಮೂಡಿಸಬೇಕಾದ ಅಗತ್ಯವನ್ನು ಮತ್ತೆ ಒಂದು ಬಾರಿ ನೆನಪಿಸಿದೆ. ಮೇ 31, 2025ರಂದು ಶಿಡ್ಲಘಟ್ಟದ ರೈಲ್ವೆ ನಿಲ್ದಾಣದ ಹತ್ತಿರ, 30 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಮೃತಳನ್ನು ಜಂಗಮಕೋಟೆ ಗ್ರಾಮದ ರೇಣುಕಾ ಎಂದು ಗುರುತಿಸಲಾಗಿದೆ.
ಅದರಲ್ಲೂ ಆಕೆ 8 ತಿಂಗಳ ಗರ್ಭಿಣಿಯಾಗಿದ್ದನ್ನು ಕಂಡು, ಸ್ಥಳೀಯರಲ್ಲಿ ತೀವ್ರ ಆಕ್ರೋಶ ಮೂಡಿದೆ. ದಿಕ್ಕು ತೋಚದೇ ಬೀದಿಗಳಲ್ಲಿ ಅಲೆದಾಡುತ್ತಿದ್ದ ಈಕೆಯು, ದುಷ್ಕರ್ಮಿಗಳ ದೈಹಿಕ ದುರ್ಬಳಕೆಗೆ ಬಲಿಯಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ. ಸಮಾಜದ ಅಂಚಿನಲ್ಲಿ ಬದುಕುತ್ತಿದ್ದ, ಯಾರಿಗೂ ಕಾಣಿಸದ ರೇಣುಕಾಳ ದಾರುಣ ಅಂತ್ಯವು ಈ ಜಾಗೃತಿಗೆ ಕರೆಗೆಳಿಸುತ್ತಿದೆ.
ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಶಿಡ್ಲಘಟ್ಟದ ಪಿಎಸ್‌ಐ ವೇಣುಗೋಪಾಲ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಕೇವಲ ಕರ್ತವ್ಯಕ್ಕೆ ಸೀಮಿತವಾಗದೇ, ಅವರು ಮರಣೋತ್ತರ ಸಂಸ್ಕಾರ ಕಾರ್ಯಕ್ಕಾಗಿ ವೈಯಕ್ತಿಕವಾಗಿ ಹಣ ಒದಗಿಸಿ ಮಾನವೀಯತೆ ಮೆರೆದಿದ್ದಾರೆ. ಅವರ ಈ ನಡೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…