ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉತ್ತಮ ಸಂಬಳದ ಉದ್ಯೋಗ ಪಡೆಯಲು ಬಯಸುವವರಿಗೆ ಮಹತ್ವದ ಅವಕಾಶ ಬಂದಿದೆ. ರಾಷ್ಟ್ರೀಯ ಜಲ ವಿದ್ಯುಚ್ಛಕ್ತಿ ನಿಗಮ ಲಿಮಿಟೆಡ್ (NHPC) ಸಂಸ್ಥೆಯು 2026ನೇ ಸಾಲಿನ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದ್ದು, ಒಟ್ಟು 81 ಟ್ರೈನಿ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಏಪ್ರಿಲ್ 6 ಎಂದು ನಿಗದಿಪಡಿಸಲಾಗಿದೆ.
ನೇಮಕಾತಿ ವಿವರಗಳು:
ಸಂಸ್ಥೆ: ರಾಷ್ಟ್ರೀಯ ಜಲ ವಿದ್ಯುಚ್ಛಕ್ತಿ ನಿಗಮ ಲಿಮಿಟೆಡ್ (NHPC)
ಹುದ್ದೆಗಳ ಸಂಖ್ಯೆ: 81
ಹುದ್ದೆಯ ಹೆಸರು: ಟ್ರೈನಿ ಎಂಜಿನಿಯರ್
ಅರ್ಜಿ ವಿಧಾನ: ಆನ್‌ಲೈನ್
ಕೊನೆಯ ದಿನಾಂಕ: ಏಪ್ರಿಲ್ 6
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್, ಎಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ವಿಭಾಗದಲ್ಲಿ ಬಿ.ಇ, ಬಿ.ಟೆಕ್ ಅಥವಾ ಬಿಎಸ್ಸಿ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 30 ವರ್ಷಗಳಾಗಿದ್ದು, ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಗೇಟ್ 2024 ಹಾಗೂ ಗೇಟ್ 2025 ಅಂಕಗಳು, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಸಂಬಳ ಮತ್ತು ಸೌಲಭ್ಯಗಳು:
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಗರಿಷ್ಠ 1.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: ₹708
ಎಸ್ಸಿ/ಎಸ್ಟಿ, ಮಹಿಳೆಯರು ಹಾಗೂ ದಿವ್ಯಾಂಗರಿಗೆ: ಶುಲ್ಕ ವಿನಾಯಿತಿ
ವಯೋಮಿತಿ ಸಡಿಲಿಕೆ:
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ: 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
ಅರ್ಜಿ ಸಲ್ಲಿಸುವ ವಿಧಾನ:
nhpcindia.com ವೆಬ್‌ಸೈಟ್‌ಗೆ ಭೇಟಿ ನೀಡಿ
ಸಂಬಂಧಿತ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿ
ಆನ್‌ಲೈನ್ ಅರ್ಜಿ ಫಾರ್ಮ್ ಭರ್ತಿ ಮಾಡಿ
ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ
ಅರ್ಜಿ ಶುಲ್ಕ ಪಾವತಿಸಿ ಸಲ್ಲಿಕೆ ಪೂರ್ಣಗೊಳಿಸಿ
ಈ ನೇಮಕಾತಿ ಪ್ರಕ್ರಿಯೆ ಎಂಜಿನಿಯರಿಂಗ್ ಪದವೀಧರರಿಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉತ್ತಮ ಉದ್ಯೋಗ ಪಡೆಯಲು ಉತ್ತಮ ಅವಕಾಶವಾಗಿದೆ.
ಮುಂಡಗೋಡ ಪೊಲೀಸರು ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಶಿರಸಿ ಹುಬ್ಬಳ್ಳಿ…
ಯಾದಗಿರಿ ಜಿಲ್ಲೆಯ ಗೋನಾಳ ಗ್ರಾಮದಲ್ಲಿ ನಡೆದ ವೃದ್ಧನ ಹತ್ಯೆ ಪ್ರಕರಣಕ್ಕೆ ಈಗ ಅಚ್ಚರಿ ಮೂಡಿಸುವ ತಿರುವು ಸಿಕ್ಕಿದೆ. 74 ವರ್ಷದ…
ಬೆಂಗಳೂರು ನಗರದ ಚಂದ್ರಾ ಲೇಔಟ್ ವ್ಯಾಪ್ತಿಯ ಗಂಗೊಂಡನಹಳ್ಳಿಯಲ್ಲಿ ಮಧ್ಯಾಹ್ನ ನಡೆದ ಭೀಕರ ಘಟನೆಯಲ್ಲಿ ವಿವಾಹಿತ ಮಹಿಳೆ ಫಿರ್ದೋಸ್ ಭಾನು ಹತ್ಯೆಯಾಗಿದ್ದಾಳೆ.…
ಮಹಾರಾಷ್ಟ್ರದಲ್ಲಿ ರಾಜಕೀಯ ಮುಖಂಡರ ಜ್ಯೋತಿಷ್ಯ ಹೇಳಿ ಖ್ಯಾತಿ ಪಡೆದಿದ್ದ ಸ್ವಯಂ ಘೋಷಿತ ಜ್ಯೋತಿಷಿ ‘ಕ್ಯಾಪ್ಟನ್’ ಅಶೋಕ್ ಖರತ್ ಇದೀಗ ಗಂಭೀರ…
ಕಾನೂನು ಪದವಿ ಪಡೆದ ನಂತರ ಉತ್ತಮ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ. ಕರ್ನಾಟಕ ಹೈಕೋರ್ಟ್‌ವು 2026ರ ನೇಮಕಾತಿಗಾಗಿ ಅಧಿಸೂಚನೆ…
ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಸಕ್ತ ವರ್ಷದಲ್ಲೇ ಸುಮಾರು 5,000 ಅಂಗನವಾಡಿ ಕೇಂದ್ರಗಳಲ್ಲಿ…