ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಅಕ್ರಮವಾಗಿ ಮಂಜೂರು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತಪಟ್ಟ ನಿವೃತ್ತ ತಹಶೀಲ್ದಾರ್ ಸೇರಿದಂತೆ ನಾಲ್ವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಗೋಣಿಬೀಡು ಹೋಬಳಿಯ ದೇವವೃಂದ ಗ್ರಾಮದಲ್ಲಿನ ಸರ್ವೆ ನಂಬರ್ 313ರ ಹೆಚ್.4 ಮತ್ತು ಹೆಚ್.5 ವ್ಯಾಪ್ತಿಯ ಸರ್ಕಾರಿ ಜಮೀನು 2018-19ರಲ್ಲಿ ಅಕ್ರಮವಾಗಿ ಮಂಜೂರಾತಿ ಮಾಡಲಾಗಿದೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಈ ಜಮೀನನ್ನು ನಿಯಮಗಳನ್ನು ಉಲ್ಲಂಘಿಸಿ ಖಾಸಗಿ ವ್ಯಕ್ತಿಗಳ ಪಾಲಾಗುವಂತೆ ಮಾಡಲಾಗಿದೆ.
ಈ ಪ್ರಕರಣದ ವಿಶೇಷ ಅಂಶವೆಂದರೆ, ಜಮೀನು ಪಡೆಯಲು ಸಂಬಂಧಿಸಿದವರು ಯಾವುದೇ ಅಧಿಕೃತ ಅರ್ಜಿಯನ್ನೇ ಸಲ್ಲಿಸಿರಲಿಲ್ಲ. ಆದರೂ ಅಧಿಕಾರಿಗಳು ದಾಖಲೆಗಳನ್ನು ತಿರುಚಿ, ಬೇರೆ ಕಡತಗಳಲ್ಲಿದ್ದ ಸಾಗುವಳಿ ಚೀಟಿಗಳನ್ನು ಬಳಸಿಕೊಂಡು ನಕಲಿ ದಾಖಲೆ ಸೃಷ್ಟಿಸಿದ್ದಾರೆ. ನಂತರ ನೇರವಾಗಿ ಖಾತೆ ಮಾಡಿಸುವ ಮೂಲಕ ಸರ್ಕಾರದ ಆಸ್ತಿಯನ್ನು ಖಾಸಗೀಕರಣಗೊಳಿಸಲು ಸಹಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಪ್ರಾಥಮಿಕ ತನಿಖೆಯಲ್ಲಿ ಅಂದಿನ ತಹಶೀಲ್ದಾರ್ ಸೇರಿದಂತೆ ನಾಲ್ವರು ಅಧಿಕಾರಿಗಳ ಪಾತ್ರ ದೃಢಪಟ್ಟಿದೆ. ಇವರಲ್ಲಿ ಒಬ್ಬರು ಈಗಾಗಲೇ ಮೃತಪಟ್ಟಿದ್ದು, ಉಳಿದವರು ನಿವೃತ್ತರಾಗಿದ್ದಾರೆ. ಪ್ರಸ್ತುತ ಮೂಡಿಗೆರೆ ತಹಶೀಲ್ದಾರ್ ಅಶ್ವಿನಿ ನೀಡಿದ ದೂರಿನ ಮೇರೆಗೆ, ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಈ ಅಕ್ರಮದಿಂದ ನಿಕೇಶ್ ಪೆರೇರಾ ಮತ್ತು ಅನಿಶ್ ಪೆರೇರಾ ಎಂಬುವರು ಲಾಭ ಪಡೆದಿದ್ದಾರೆ ಎನ್ನಲಾಗಿದೆ. ಅರ್ಹತೆ ಇಲ್ಲದೇ ಹಾಗೂ ಯಾವುದೇ ಅರ್ಜಿ ಸಲ್ಲಿಸದೇ, ಅಧಿಕಾರಿಗಳ ಸಹಕಾರದಿಂದ ಸರ್ಕಾರಿ ಜಮೀನನ್ನು ತಮ್ಮ ಹೆಸರಿಗೆ ಮಾಡಿಸಿಕೊಂಡಿರುವುದು ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ.
ಸರ್ಕಾರಿ ಜಮೀನುಗಳನ್ನು ಕಾಪಾಡಬೇಕಾದ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಹೆಚ್ಚುತ್ತಿದೆ.
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…