Categories: Latest

55 ದಿನಗಳಲ್ಲಿ 900 ದಾಳಿ, 235 ಎಫ್‌ಐಆರ್: ಆಹಾರ ಕಲಬೆರಕೆ ವಿರುದ್ಧ ಐಎಎಸ್ ತುಕಾರಾಮ್ ಮುಂಡೆ ಅಬ್ಬರ!

ಮಹಾರಾಷ್ಟ್ರದಲ್ಲಿ ಆಹಾರ ಕಲಬೆರಕೆ ವಿರುದ್ಧ ಕಠಿಣ ಕ್ರಮಗಳ ಮೂಲಕ ಐಎಎಸ್ ಅಧಿಕಾರಿ ತುಕಾರಾಮ್ ಮುಂಡೆ ಸದ್ಯ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮೇ 25ರಂದು ಆಹಾರ ಮತ್ತು ಔಷಧ ಆಡಳಿತ (FDA) ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಬಳಿಕ, ಕೇವಲ 55 ದಿನಗಳಲ್ಲೇ ಆಹಾರ ಸುರಕ್ಷತೆಗಾಗಿ ಅವರು ಕೈಗೊಂಡ ಕ್ರಮಗಳು ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿವೆ. ಅವರ ದಾಳಿಯ ಭೀತಿಯಿಂದಲೇ ಹಲವು ಕಡೆ ಕಲಬೆರಕೆ ಹಾಲು ಮತ್ತು ಆಹಾರ ಪದಾರ್ಥಗಳನ್ನು ತಯಾರಕರು ತಾವೇ ನಾಶಪಡಿಸುತ್ತಿದ್ದಾರೆ ಎನ್ನಲಾಗಿದೆ.

ಈ ಅವಧಿಯಲ್ಲಿ ಎಫ್‌ಡಿಎ ತಂಡವು ರಾಜ್ಯದಾದ್ಯಂತ 900ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿದ್ದು, 235 ಎಫ್‌ಐಆರ್‌ಗಳನ್ನು ದಾಖಲಿಸಿದೆ. 350ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು, 274 ಆಹಾರ ಉತ್ಪಾದನಾ ಘಟಕಗಳನ್ನು ಮುಚ್ಚಲಾಗಿದೆ. ಶುಚಿತ್ವದ ಕೊರತೆ ಹಾಗೂ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿದ್ದ ಹಲವು ಹೋಟೆಲ್‌, ಬೇಕರಿ ಹಾಗೂ ಆಹಾರ ಮಳಿಗೆಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಹಾಲಿನ ಮಾದರಿಗಳ ಪರೀಕ್ಷೆಯಲ್ಲಿ ಸುಮಾರು 79 ಶೇಕಡಾ ಮಾದರಿಗಳು ಗುಣಮಟ್ಟದಲ್ಲಿ ವಿಫಲವಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಇತ್ತೀಚಿನ ದಿನಗಳಲ್ಲಿ ಸಾವಿರಾರು ಲೀಟರ್ ಕಲಬೆರಕೆ ಹಾಲು, ಕೋಟ್ಯಂತರ ರೂಪಾಯಿ ಮೌಲ್ಯದ ಕಳಪೆ ಎಣ್ಣೆ, ರಾಸಾಯನಿಕಗಳು ಹಾಗೂ ನಕಲಿ ಸಿಹಿತಿಂಡಿಗಳನ್ನು ವಶಪಡಿಸಿಕೊಂಡು ನಾಶಪಡಿಸಲಾಗಿದೆ. ಪಾಕಿಸ್ತಾನ ಮೂಲದ ಬ್ರ್ಯಾಂಡ್‌ ಇಲ್ಲದ ಫೇಸ್‌ ಕ್ರೀಮ್‌ನಲ್ಲಿ ಅಪಾಯಕಾರಿ ರಾಸಾಯನಿಕಗಳು ಪತ್ತೆಯಾದ ಹಿನ್ನೆಲೆಯಲ್ಲಿ ಅದರ ಜಾಲವನ್ನೂ ಭೇದಿಸಲಾಗಿದೆ ಎನ್ನಲಾಗಿದೆ. ಈ ಕಟ್ಟುನಿಟ್ಟಿನ ಕ್ರಮಗಳಿಂದ ಗುಣಮಟ್ಟದ ಹಾಲಿನ ಬೇಡಿಕೆ ಹೆಚ್ಚಾಗಿ, ರಾಜ್ಯದಲ್ಲಿ ಹಾಲು ಹಾಗೂ ಪನೀರ್‌ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ ಎಂಬ ವರದಿಗಳಿವೆ.

25 ವರ್ಷಗಳ ಸೇವಾವಧಿಯಲ್ಲಿ 21 ಬಾರಿ ವರ್ಗಾವಣೆಯಾಗಿರುವ ತುಕಾರಾಮ್ ಮುಂಡೆ ಅವರ ವಿರುದ್ಧ ವರ್ಗಾವಣೆ ಮಾಡಲು ಭಾರೀ ಲಂಚದ ಆಫರ್ ಬಂದಿತ್ತು ಎಂಬ ವಿಚಾರವೂ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ಹೇಳಲಾಗುತ್ತಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಯಾವುದೇ ಒತ್ತಡಕ್ಕೂ ಮಣಿಯದೆ ಕ್ರಮ ಕೈಗೊಳ್ಳುತ್ತಿರುವ ಅವರ ಕಾರ್ಯವೈಖರಿ ಈಗ ದೇಶಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಇಂತಹ ಪ್ರಾಮಾಣಿಕ ಅಧಿಕಾರಿಗಳು ಎಲ್ಲ ರಾಜ್ಯಗಳಲ್ಲೂ ಇರಬೇಕು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

2 days ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

2 days ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

2 days ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

3 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

3 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

3 days ago