Categories: CorruptionLatest

ಆಸ್ತಿ ವರ್ಗಾವಣೆಗೆ ₹9,950 ಲಂಚ: ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆ ಸಂಬಂಧದ ಕಡತವನ್ನು ವಿಲೇವಾರಿ ಮಾಡುವುದಕ್ಕಾಗಿ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯನ್ನು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಹಾಗರಗಾ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ವೇದಾಂಗ್ ಅವರು ₹9,950 ಲಂಚ ಸ್ವೀಕರಿಸುತ್ತಿದ್ದ ವೇಳೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆ ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ ನಡೆದಿದೆ.

ದೂರುದಾರ ಸಂಜೀವ್ ಅವರ ಮಾವ ಕಿಶನ್ ಪವಾರ್ ಮೃತಪಟ್ಟ ಹಿನ್ನೆಲೆ, ಅವರ ಹೆಸರಿನಲ್ಲಿದ್ದ ಹಾಗರಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಜಾದಪುರ ಗ್ರಾಮದ ಸರ್ವೆ ನಂ.111/1ರ ಖುಲ್ಲಾ ನಿವೇಶನ ಸಂಖ್ಯೆ 12 ಅನ್ನು ತಮ್ಮ ಹೆಸರಿಗೆ ವರ್ಗಾವಣೆ ಮಾಡಿಕೊಡುವಂತೆ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಲಾಗಿತ್ತು. ಇದಕ್ಕಾಗಿ ಮರಣ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನೂ ಸಲ್ಲಿಸಲಾಗಿತ್ತು.

ಆದರೆ, ಆಸ್ತಿ ವರ್ಗಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವೇದಾಂಗ್ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಸಂಜೀವ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಪರಿಶೀಲನೆಯ ಬಳಿಕ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ, ಕಾರ್ಯದರ್ಶಿ ಲಂಚದ ಹಣ ಸ್ವೀಕರಿಸುತ್ತಿದ್ದ ಕ್ಷಣದಲ್ಲೇ ಅವರನ್ನು ಬಂಧಿಸಿದರು.

ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ರವಿ ಪವಾರ್ ಅವರ ನೇತೃತ್ವದಲ್ಲಿ ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

4 hours ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

4 hours ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

4 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

4 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

4 days ago