Crime

ಕುಣಿಗಲ್‌ನಲ್ಲಿ 9ನೇ ತರಗತಿ ಬಾಲಕಿ ಗರ್ಭಿಣಿ.!: 21 ವರ್ಷದ ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಕುಣಿಗಲ್ ತಾಲೂಕಿನ ಗ್ರಾಮವೊಂದರಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಆರೋಪಿಯಾಗಿರುವ ಕಿರಣ್ (21) ವಿರುದ್ಧ ಅಮೃತೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮೂಲಗಳ ಪ್ರಕಾರ, ಆರೋಪಿಯಾದ ಕಿರಣ್ ಎಂಬಾತ ಬಾಲಕಿಯ ನಂಬಿಕೆ ಗೆದ್ದು, ಅವಳನ್ನು ಪುಸಲಾಯಿಸಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಹಿನ್ನೆಲೆಯಲ್ಲಿ ಬಾಲಕಿ ಗರ್ಭಿಣಿಯಾಗಿರುವುದು ತಡವಾಗಿ ಪತ್ತೆಯಾಯಿತು.

ಬಾಲಕಿಯ ತಾಯಿ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದು, ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದು ಬಾರಿ ಊರಿಗೆ ಬಂದು ಹೋಗುತ್ತಿದ್ದಳು. ಈ ನಡುವೆ ಬಾಲಕಿ ತನ್ನ ತಂದೆಯ ಜತೆಗೆ ಊರಿನಲ್ಲಿ ವಾಸವಾಗಿದ್ದಳು. ಭಾನುವಾರ ತಾಯಿ ಮನೆಗೆ ಬಂದಾಗ, ಬಾಲಕಿ ಶಕ್ತಿಹೀನವಾಗಿ ಮಲಗಿರುವುದು ಕಾಣಿಸಿಕೊಂಡಿತು. ಆರೋಗ್ಯ ವಿಚಾರಿಸಿದಾಗ, ತಲೆ ನೋವು ಮತ್ತು ಅಸ್ವಸ್ಥತೆ ಬಗ್ಗೆ ತಿಳಿಸಿದಳು. ತಕ್ಷಣವೇ ಅವರನ್ನು ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ಆರೋಗ್ಯ ತಪಾಸಣೆಯ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ವೈದ್ಯರಿಗೆ ತಿಳಿದುಬಂದಿತು. ಇದರಿಂದ ತಾಯಿಗೆ ದೊಡ್ಡ ಆಘಾತವಾಯಿತು. ಬಳಿಕ ವೈದ್ಯಕೀಯ ಹಾಗೂ ಕಾನೂನು ನಿಯಮಗಳ ಅನುಸಾರ ಗರ್ಭಪಾತ ಮಾಡಲಾಯಿತು. “ಬಾಲಕಿಯ ವಿದ್ಯಾಭ್ಯಾಸಕ್ಕೆ ತೊಂದರೆ ಆಗಬಾರದು ಎಂಬ ಕಾರಣದಿಂದ ಗರ್ಭಪಾತಕ್ಕೆ ನಿರ್ಧಾರ ತೆಗೆದುಕೊಳ್ಳಲಾಯಿತು” ಎಂದು ತಾಯಿ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಕ್ಸೊ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿಯಲ್ಲಿ ತನಿಖೆ ಪ್ರಾರಂಭಿಸಲಾಗಿದೆ. ಆರೋಪಿಗೆ ನ್ಯಾಯಾಂಗ ಕ್ರಮ ಕೈಗೊಳ್ಳುವ ದಿಶೆಯಲ್ಲಿ ಪೊಲೀಸರು ಮುಂದಾಗಿದ್ದಾರೆ.

nazeer ahamad

Recent Posts

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

18 hours ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

24 hours ago

₹20 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ!

ಹಾವೇರಿ: ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಕೆಲಸ ಮಾಡಿಕೊಡಲು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಅಧಿಕಾರಿಯೊಬ್ಬರು ಲೋಕಾಯುಕ್ತ…

24 hours ago

ವಿವಾಹಿತ ಮಹಿಳೆ ಜೊತೆ ಬಾಯ್‌ಫ್ರೆಂಡ್‌ ಪರಾರಿ? ಕಣ್ಣೀರಿಟ್ಟ ದೆಹಲಿ ಬ್ಲಾಗರ್; “ನನ್ನನ್ನು ಬಿಟ್ಟು ಆಕೆಯಲ್ಲೇನಿತ್ತು?”

ನವದೆಹಲಿ: ತನ್ನ ಪ್ರಿಯಕರ ಮತ್ತೊಬ್ಬ ಮಹಿಳೆಯೊಂದಿಗೆ ತೆರಳಿದ್ದಾನೆ ಎಂದು ಆರೋಪಿಸಿ ದೆಹಲಿ ಮೂಲದ ಖ್ಯಾತ ಬ್ಲಾಗರ್ ಶ್ವೇತಾ ದ್ವಿವೇದಿ ಸಾಮಾಜಿಕ…

24 hours ago

ನಕಲಿ ಮಾಲೀಕರನ್ನು ನಿಲ್ಲಿಸಿ ₹1.08 ಕೋಟಿ ಮೌಲ್ಯದ ಜಮೀನು ಮಾರಾಟ: ನಾಲ್ವರ ವಿರುದ್ಧ FIR

ಬಳ್ಳಾರಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಿಜವಾದ ಜಮೀನು ಮಾಲೀಕರ ಹೆಸರನ್ನು ದುರುಪಯೋಗಪಡಿಸಿಕೊಂಡು ಸುಮಾರು ₹1.08 ಕೋಟಿ ಮೌಲ್ಯದ ಜಮೀನನ್ನು ವಂಚನೆಯಿಂದ…

1 day ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಮುಂದುವರಿಕೆ; ವಿಚಾರಣೆಯಲ್ಲಿ ಸ್ಫೋಟಕ ಅಂಶಗಳ ಉಲ್ಲೇಖ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಮಹತ್ವದ ಹಂತ ತಲುಪಿದೆ. ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ರಾವ್ ಮಾಫಿ…

2 days ago