
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನಲ್ಲಿ ಇಂದು ಬೆಳಗ್ಗೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಬೈಕ್ ಸವಾರನು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕುಸುಗಲ್ ಗ್ರಾಮದ ಹತ್ತಿರದ ಹಳ್ಳದ ಬಳಿ ಈ ದಾರುಣ ಘಟನೆ ನಡೆದಿದೆ.
ಅಳಗವಾಡಿ ಗ್ರಾಮದ ಯುವಕನೊಬ್ಬ, ಬ್ಯಾಹಟ್ಟಿ ಗ್ರಾಮದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ಅನ್ನು ಓವರ್ ಟೆಕ್ ಮಾಡುವ ವೇಳೆ ನಿಯಂತ್ರಣ ತಪ್ಪಿದ್ದಾನೆ. ಈ ಸಂದರ್ಭ ಬೈಕ್ ಸ್ಕಿಡ್ ಆಗಿ ಬಸ್‌ನ ಹಿಂದಿನ ಚಕ್ರ ಸವಾರನ ತಲೆಯ ಮೇಲೆ ಹರಿದಿದೆ. ಪರಿಣಾಮವಾಗಿ ಆತ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.
ಘಟನೆ ಸ್ಥಳಕ್ಕೆ ತಕ್ಷಣವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಗುರುತು ಹಾಗೂ ಮೂಲ ಸ್ಥಳ ತಿಳಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ವರದಿ: ಶಿವು ಪಿ.ಆರ್.