ಗುಂಡ್ಲುಪೇಟೆಯಲ್ಲಿ ಹೃದಯಾಘಾತದಿಂದ ನಾಲ್ಕನೇ ತರಗತಿಯ ವಿದ್ಯಾರ್ಥಿ ಸಾವು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕುರಬರಗೇರಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮನೋಜ್ ಕುಮಾರ್ (10) ಎಂಬ ನಾಲ್ಕನೇ ತರಗತಿಯ ವಿದ್ಯಾರ್ಥಿ ಪಾಠ ಕೇಳುತ್ತಿದ್ದ ವೇಳೆ ಅಸ್ವಸ್ಥನಾಗಿ ಕುಸಿದುಬಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ತನ್ನ ಹೃದಯದಲ್ಲಿ ಜನ್ಮಜಾತ ರಂಧ್ರವಿದ್ದು, ಇದೇ ಕಾರಣಕ್ಕಾಗಿ ಮನೋಜ್ ಈಗಾಗಲೇ ಬೆಂಗಳೂರು ಜಯದೇವ ಮತ್ತು ಅಪೋಲೋ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದ ಎನ್ನಲಾಗಿದೆ. ಪಾಠ ವೇಳೆ ಅವನ ಸ್ಥಿತಿ ಗಂಭೀರವಾಗಿದ್ದು, ಶಾಲೆಯಲ್ಲೇ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Related News

error: Content is protected !!