ಮಂಡ್ಯ, ಜುಲೈ 19: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಗಾವಲು ವಾಹನವೊಂದು ಪಲ್ಟಿಯಾದ ಘಟನೆ ಮಂಡ್ಯ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ. ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ–ಟಿಎಂ ಹೂಸೂರು ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.

ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಮುಗಿಸಿಕೊಂಡು ಉಪಮುಖ್ಯಮಂತ್ರಿಯವರ ಕಾಫಿಲಾ ಬೆಂಗಳೂರು ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಬೆಂಗಾವಲಿನಲ್ಲಿ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಿಬ್ಬಂದಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಯಾವುದೇ ರೀತಿಯ ಅಪಾಯವಾಗಿಲ್ಲ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಮುಂದುವರಿಸಲಾಗಿದೆ.

 

error: Content is protected !!