ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ ವಾಸಂತಿ ಅಮರ್ ನಿವಾಸದ ಮೇಲೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಅಚ್ಚರಿ ದಾಳಿ ನಡೆಸಿದ್ದಾರೆ. ಈ ದಾಳಿ ಬೆಂಗಳೂರಿನ ಆರ್ಟಿ ನಗರದಲ್ಲಿರುವ ಅವರ ನಿವಾಸದಲ್ಲಿ ನಡೆದಿದ್ದು, ಸದ್ಯದಲ್ಲಿಯೇ ರಾಜಧಾನಿಯಲ್ಲಿ ಚರ್ಚೆಯ ಕೆಂದ್ರವಾಗಿದೆ.
ಅಕ್ರಮ ಆಸ್ತಿ, ಜಮೀನಿನ ವರ್ಗಾವಣೆಗೆ ಸಂಬಂಧಿಸಿದ ಆರೋಪ
ವಾಸಂತಿ ಅಮರ್ ವಿರುದ್ಧ ಸರ್ಕಾರಿ ಜಮೀನುಗಳನ್ನು ಅಕ್ರಮವಾಗಿ ಖಾಸಗಾ ವ್ಯಕ್ತಿಗಳ ಹೆಸರಿಗೆ ವರ್ಗಾಯಿಸಿದ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ತನಿಖಾ ತಂಡ ಈ ದಾಳಿಗೆ ಮುಂದಾಗಿದೆ. ವಾಸಂತಿ ಅಮರ್ ಅವರು ವಿವಿಧ ಪ್ರಮುಖ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಆಡಳಿತಾಧಿಕಾರಿಯಾಗಿ ಗುರುತಿಸಲ್ಪಟ್ಟಿದ್ದು, ಇತ್ತೀಚೆಗೆ ಅವರು ಸಂಬಂಧಪಟ್ಟ ಕೆಲ ನಿರ್ಧಾರಗಳು ಪ್ರಶ್ನೆಗೆ ಒಳಗಾಗಿದ್ದವು ಎಂಬ ಮಾಹಿತಿ ಹಿನ್ನಲೆಯಲ್ಲಿ ಅಧಿಕಾರಿಗಳು ಹಠಾತ್ ದಾಳಿ ನಡೆಸಿದ್ದಾರೆ.
