ಮಾಗಡಿ, ಆಗಸ್ಟ್ 6: ಸಾಮಾಜಿಕ ಜಾಲತಾಣದ ಪರಿಚಯ ದುರಿತ ಅಂತ್ಯಕ್ಕೆ ಆಗಿರುವ ಘಟನೆ ಮಾಗಡಿಯಲ್ಲಿ ಬೆಳಕಿಗೆ ಬಂದಿದೆ. ಇನ್‌ಸ್ಟಾಗ್ರಾಂನಲ್ಲಿ ಪರಿಚಯ ಬೆಳೆಸಿದ ಬಾಲಕಿಗೆ ದೈಹಿಕ ಸಂಬಂಧ ಬೆಳೆಸಿ ಗರ್ಭಿಣಿಯಾಗುವಂತಾಗಿಸಿದ ಆರೋಪಿಯನ್ನು ಮಾಗಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ತುಮಕೂರು ಮೂಲದ ನರಸಿಂಹಮೂರ್ತಿ (25) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಆರೋಪಿಯು ಇನ್‌ಸ್ಟಾಗ್ರಾಂ ಜಾಲತಾಣದ ಮೂಲಕ ಅಪ್ರಾಪ್ತ ಬಾಲಕಿಯನ್ನು ಸಂಪರ್ಕಿಸಿ, ನಿರಂತರವಾಗಿ ಸಂದೇಶ ಕಳುಹಿಸುತ್ತಾ ಸ್ನೇಹ ಬೆಳೆಸಿದ್ದ. ನಂಬಿಕೆ ಗೆದ್ದ ಆರೋಪಿ ಪ್ರೀತಿಯ ನಾಟಕವಾಡಿ, ಬಾಲಕಿಗೆ ಒತ್ತಾಯಪೂರ್ವಕವಾಗಿ ದೈಹಿಕ ಸಂಬಂಧ ಹೊಂದಿದ್ದ.

ಈ ದುರಂತದ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದು, ವಿಷಯ ತಿಳಿದ ಕುಟುಂಬಸ್ಥರು ಮಾಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ತನಿಖೆಗೆ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ನುಗ್ಗಿದ ಪೊಲೀಸರು, ಆರೋಪಿ ನರಸಿಂಹಮೂರ್ತಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಚಾರಣೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಸಂಬಂಧ ಮಾಗಡಿ ಠಾಣೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

ಸಾಮಾಜಿಕ ಜಾಲತಾಣಗಳ ಸುರಕ್ಷತೆ ಕುರಿತು ಪುನರ್‌ಚಿಂತನೆ ಅಗತ್ಯವಿರುವ ಪ್ರಕರಣ ಇದು ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392

error: Content is protected !!