ಪೆಟ್ರೋಲ್ ಬಂಕ್ ಮಾಲೀಕನ ಕೆಲಸಕ್ಕೆ ಸಹಾಯ ಮಾಡುವ ನೆಪದಲ್ಲಿ 30 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಇನ್ಸ್‌ಪೆಕ್ಟರ್ ಅಬ್ದುಲ್ ಗನಿ ಅಲಿಯಾಸ್ ಅಮರ್, ಸೋಮವಾರ (ಆ.18) ದೂರುದಾರ ನಾಗೀರೆಡ್ಡಿ ನೀಡಿದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ತಂಡ ದಾಳಿ ನಡೆಸಿದೆ.

ಅಕಸ್ಮಾತ್ ನಡೆದ ದಾಳಿಯಲ್ಲಿ ಆರೋಪಿಯನ್ನು ಅಧಿಕಾರಿಗಳು ಸ್ಥಳದಲ್ಲೇ ವಶಕ್ಕೆ ಪಡೆದಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಎಸ್‌ಪಿ ಸತೀಶ ಚಿಟಗುಪ್ಪಿ ನೇತೃತ್ವದಲ್ಲಿ, ಇನ್ಸ್‌ಪೆಕ್ಟರ್‌ಗಳಾದ ಕಾಳಪ್ಪ ಬಡಿಗೇರ್, ರವಿಪುರುಷೋತ್ತಮ್ ಹಾಗೂ ಸಿಬ್ಬಂದಿ ಸೇರಿ ಯಶಸ್ವಿಯಾಗಿ ನಡೆಸಿದ್ದಾರೆ.

ಘಟನೆಯಿಂದ ರಾಯಚೂರಿನಲ್ಲಿ ಸರ್ಕಾರಿ ನೌಕರರ ಲಂಚ ಬೇಡಿಕೆ ವಿರುದ್ಧ ಮತ್ತೊಮ್ಮೆ ಚರ್ಚೆ ಶುರುವಾಗಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

error: Content is protected !!