ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ ಆಹಾರ ಇಲಾಖೆ ಶಿರಸ್ತೇದಾರ್ ಪುಷ್ಪಲತಾ ಮತ್ತು ಗ್ರಾಮಾಂತರ ಠಾಣೆ ಪೊಲೀಸರು ಬುಧವಾರ ದಾಳಿ ನಡೆಸಿದರು.
ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು, ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಅನ್ನಭಾಗ್ಯದ ನಾಲ್ಕು ಕ್ವಿಂಟಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿಯನ್ನು ವಶಕ್ಕೆ ಪಡೆದಿದ್ದಾರೆ. ಈ
ಕುರಿತು ಗೋದಾಮು ಮಾಲೀಕರಿಗೆ ವಿಚಾರಿಸಿದಾಗ, ಅವರು ಹಾರಿಕೆಯ ಉತ್ತರ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾ‌ರ್ ಮತ್ತು ಆಹಾರ ಇಲಾಖೆ ಹಿರಿಯ ಅಧಿಕಾರಿಗಳ ಆದೇಶದಂತೆ ಗೋದಾಮು ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಆಹಾರ ಇಲಾಖೆ ಶಿರಸ್ತೇದಾ‌ರ್ ಪುಷ್ಪಲತಾ ತಿಳಿಸಿದರು.
ಗ್ರಾಮಾಂತರ ಠಾಣೆಯ ಪಿಎಸ್‌ಐ ರಮೇಶ್ ಗುಗ್ಗರಿ, ರಾಜಸ್ವ ನಿರೀಕ್ಷಕ ಖಾದರ್ ಹಾಗೂ ಆಹಾರ ಇಲಾಖೆ ಸಿಬ್ಬಂದಿ ಹಾಜರಿದ್ದರು.
ವರದಿ: ಅವಿನಾಶ್

Related News

error: Content is protected !!