ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ವಾಹನ ಚಾಲಕರಿಂದ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಆರ್‌ಟಿಓ ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಎಸ್‌ಪಿ ಡಾ. ಕೋನ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ ನಡೆಸಿದ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ನೆಲಮಂಗಲ ಆರ್‌ಟಿಓ ಇನ್ಸ್ಪೆಕ್ಟರ್‌ಗಳಾದ ದಿನೇಶ್ ಮತ್ತು ಕಿರಣ್ ಅವರನ್ನು ವಶಕ್ಕೆ ಪಡೆಯಲಾಗಿದೆ.

ಪ್ರತಿದಿನ ವಾಹನ ತಪಾಸಣೆ ನಡೆಸುತ್ತಿದ್ದ ಈ ಅಧಿಕಾರಿಗಳು, ಚಾಲಕರಿಂದ ಹಣ ಪಡೆದು ಬಿಡುತ್ತಿದ್ದರು ಎಂಬ ದೂರಿನ ಆಧಾರದಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೂಕ್ತ ಯೋಜನೆ ರೂಪಿಸಿ ಇಬ್ಬರನ್ನೂ ಬಲೆಗೆ ಸೆಳೆದಿದ್ದಾರೆ.

ಸದ್ಯ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

Related News

error: Content is protected !!