ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯನೊಬ್ಬನ ವಿರುದ್ಧ ಸಹೋದ್ಯೋಗಿ ಮಹಿಳೆ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತೆ HSR Layout Police Stationನಲ್ಲಿ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.

ಸಂತ್ರಸ್ತೆ ಕಳೆದ 9 ತಿಂಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಆಸ್ಪತ್ರೆಯ ಮುಖ್ಯಸ್ಥ ರಾಕೇಶ್ ಜಯಪ್ರಕಾಶ್ ಅವರು ಸಂತ್ರಸ್ತೆಯೊಂದಿಗೆ ಅನುಚಿತವಾಗಿ ಮಾತನಾಡಿದ್ದು ಮಾತ್ರವಲ್ಲದೆ, ‘ಮಿಸ್ ಯು’ ಎಂಬ ರೀತಿಯ ಸಂದೇಶಗಳನ್ನು ಕಳುಹಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಫೋನ್ ಕರೆಗಳ ಮೂಲಕವೂ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವಿಷಯ ತಿಳಿದ ಬಳಿಕ ಸಂತ್ರಸ್ತೆಯ ಪತಿ ಜಗಳ ಮಾಡಿದ್ದು, ಇದರ ಪರಿಣಾಮವಾಗಿ ಆಕೆ ಕೆಲಸವನ್ನು ಬಿಟ್ಟುಬಿಡುವ ಪರಿಸ್ಥಿತಿ ಎದುರಿಸಬೇಕಾಯಿತು ಎಂದು ತಿಳಿಸಲಾಗಿದೆ.

ಪ್ರಸ್ತುತ ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಲೈಂಗಿಕ ಕಿರುಕುಳ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ತನಿಖೆ ಮುಂದುವರಿದಿದೆ.

Related News

error: Content is protected !!